ಟೀಂ ಇಂಡಿಯಾ(Team India)ದ ಆಕ್ರಮಣಕಾರಿ ಬೌಲಿಂಗ್ ದಾಳಿಗೆ ತತ್ತರಿಸಿದ ಸೌತ್ ಆಫ್ರಿಕಾ(South Africa), ಮೂರನೇ ODI ಪಂದ್ಯದಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಭಾರತದ ವಿರುದ್ಧ ಏಕದಿನ ಕ್ರಿಕೆಟ್(ODI Cricket)ನಲ್ಲಿ ಅತಿ ಕಡಿಮೆ ಮೊತ್ತ ಕಲೆಹಾಕಿದೆ.
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಸೌತ್ ಆಫ್ರಿಕಾ, ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಭಾರತದ ಪರ ಆಕ್ರಮಣಕಾರಿ ಬೌಲಿಂಗ್ ದಾಳಿ ನಡೆಸಿದ ಬೌಲರ್‌ಗಳು, ಹರಿಣಗಳ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಟೀಂ ಇಂಡಿಯಾ ಬೌಲರ್‌ಗಳ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ಶರಣಾದ ಸೌತ್ ಆಫ್ರಿಕಾ, 27.1 ಓವರ್‌ಗಳಲ್ಲಿ 99 ರನ್‌ಗಳಿಗೆ ಆಲೌಟ್ ಆಯಿತು. ಆ ಮೂಲಕ ಭಾರತದ ವಿರುದ್ಧ ODI ಕ್ರಿಕೆಟ್‌ನಲ್ಲಿ ಅತ್ಯಂತ ಕಡಿಮೆ ಸ್ಕೋರ್ ದಾಖಲಿಸಿತು.
ಈ ಹಿಂದೆ 1999ರಲ್ಲಿ ನೈರೋಬಿಯಲ್ಲಿ ನಡೆದ ಪಂದ್ಯದಲ್ಲಿ 48 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್ ಆಗಿದ್ದು, ಮೆನ್ ಇನ್ ಬ್ಲೂ ವಿರುದ್ಧದ ಹಿಂದಿನ ಕಡಿಮೆ ಸ್ಕೋರ್ ಆಗಿತ್ತು. ಅಲ್ಲದೇ ಏಕದಿನ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿಗೆ 100ಕ್ಕಿಂತ ಕಡಿಮೆ ಸ್ಕೋರ್‌ಗೆ ಆಲೌಟ್ ಆಗಿದೆ. ಇದಕ್ಕೂ ಮೊದಲು 1993ರಲ್ಲಿ ಆಸ್ಟ್ರೇಲಿಯಾ ವಿರುದ್ಧ 69 ರನ್‌ಗಳಿಗೆ ಆಲೌಟ್ ಆಗಿದ್ದ ಸೌತ್ ಆಫ್ರಿಕಾ, ನಂತರ 2008ರಲ್ಲಿ ಇಂಗ್ಲೆಂಡ್ ವಿರುದ್ಧ 83 ರನ್ ಹಾಗೂ 2022ರಲ್ಲಿ ಇಂಗ್ಲೆಂಡ್ ವಿರುದ್ಧ 83 ರನ್‌ಗಳಿಗೆ ಆಲೌಟ್ ಆಗಿತ್ತು.
ಮೂರನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಸೌತ್ ಆಫ್ರಿಕಾ ಪರ ಯಾವುದೇ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಪರಿಣಾಮಕಾರಿ ಬೌಲಿಂಗ್ ದಾಳಿ ನಡೆಸಿದ ಭಾರತದ ಪರ ಕುಲ್‌ದೀಪ್ ಯಾದವ್ 18 ರನ್‌ಗೆ 4 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್ ಹಾಗೂ ಮೊಹಮ್ಮದ್ ಸಿರಾಜ್ ತಲಾ 2 ವಿಕೆಟ್ ಪಡೆದರು.
IND v SA 3rd ODI South Africa India ODI Series