ಸೌತ್ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯಲ್ಲಿ ಭಾರತ ತಂಡದ ಹಿರಿಯ ಹಾಗೂ ಅನುಭವಿ ಆಟಗಾರನ ಸ್ಥಾನ ತುಂಬಿರುವ ದಿನೇಶ್ ಕಾರ್ತಿಕ್, 16 ವರ್ಷಗಳ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ಮಿಂಚಿದರು.
ಜೊಹಾನ್ಸ್‌ಬರ್ಗ್‌ನ ವಾಂಡರರ್ಸ್‌ನಲ್ಲಿ 2006ರಲ್ಲಿ ಸೌತ್ ಆಫ್ರಿಕಾ ವಿರುದ್ದವೇ ನಡೆದಿದ್ದ T20I ಉದ್ಘಾಟನಾ ಸರಣಿಯಲ್ಲಿ ದಿನೇಶ್ ಕಾರ್ತಿಕ್ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದೀಗ 16 ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಆಡುತ್ತಿರುವ ದಿನೇಶ್ ಕಾರ್ತಿಕ್, ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದರು.

16 ವರ್ಷಗಳ ಬಳಿಕವೂ ಟೀಂ ಇಂಡಿಯಾದ ಸಕ್ರಿಯ ಆಟಗಾರನಾಗಿ ಕಾಣಿಸಿಕೊಳ್ಳುತ್ತಿರುವ ದಿನೇಶ್ ಕಾರ್ತಿಕ್, 27 ಬಾಲ್‌ಗಳಲ್ಲಿ 55 ರನ್ ಕಲೆಹಾಕುವ ಮೂಲಕ ಭಾರತ ತಂಡದ ಗೆಲುವಿನ ರೂವಾರಿಯಾಗಿ ಮಿಂಚಿದರು. ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಸಿಡಿಸಿದ ದಿನೇಶ್ ಕಾರ್ತಿಕ್, ತಮ್ಮ 37ನೇ ವಯಸ್ಸಿನಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ಸಿಡಿಸಿದ ಹಿರಿಯ ಆಟಗಾರ ಎನಿಸಿದ್ದಾರೆ. ಈ ಹಿಂದೆ 2018ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಎಂ.ಎಸ್.ಧೋನಿ, 36 ವರ್ಷ 229 ದಿನಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಆದರೆ ಇದೀಗ ದಿನೇಶ್ ಕಾರ್ತಿಕ್, ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪಂದ್ಯದ ಬಳಿಕ ತಮ್ಮ ಪ್ರದರ್ಶನದ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್, “ನನಗೆ ನಾನು ಹಿರಿಯ ಎನಿಸುತ್ತದೆ, ನಾನು ಬೇರೆ ಬೇರೆ ಜನರೇಷನ್ ಜೊತೆಗೆ ಆಡಿದ್ದೇನೆ. ಇದು ನಿಜಕ್ಕೂ ಖುಷಿಕೊಡುತ್ತದೆ”.