ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಕ್ಕೆ ಶಾಕ್ ಎದುರಾಗಿದೆ. ಟೀಮ್ ಇಂಡಿಯಾದ ಬೆಸ್ಟ್ ಓಪನರ್ ಕೆ.ಎಲ್. ರಾಹುಲ್ ಸ್ನಾಯು ಸೆಳೆತದಿಂದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ. ಮೊದಲೇ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಿದ್ದ ಟೀಮ್ ಇಂಡಿಯಾ ಈಗ ರಾಹುಲ್ ಗಾಯದಿಂದ ಮತ್ತಷ್ಟು ಹೊಡೆತ ತಂದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿ ನವೆಂಬರ್ 25ರಂದು ಆರಂಭವಾಗಲಿದೆ.
ಕೆಎಲ್ ರಾಹುಲ್ ಬದಲು ಸೂರ್ಯಕುಮಾರ್ ಯಾದವ್ ತಂಡ ಸೇರಿಕೊಂಡಿದ್ದಾರೆ. ಟೆಸ್ಟ್ ಸರಣಿಗೆ ಈಗಾಗಲೇ ಬಿಸಿಸಿಐ ರೋಹಿತ್ ಶರ್ಮಾ, ರಿಷಬ್ ಪಂತ್, ಮೊಹಮ್ಮದ್ ಶಮಿ, ಜಸ್ ಪ್ರಿತ್ ಬುಮ್ರಾ ಮತ್ತು ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಿತ್ತು. ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್ ಪಂದ್ಯಕ್ಕೆ ವಿರಾಮ ನೀಡಲಾಗಿತ್ತು. ಈಗ ರಾಹುಲ್ ಕೂಡ ತಂಡದಿಂದ ದೂರ ಉಳಿಯಲಿದ್ದಾರೆ. ಹೀಗಾಗಿ ಟೀಮ್ ಇಂಡಿಯಾಕ್ಕೆ ಆಘಾತವಾಗಿದೆ.
ಟೆಸ್ಟ್ ಸರಣಿಗೆ ಟೀಂ ಇಂಡಿಯಾ:
ಅಜಿಂಕ್ಯಾ ರಹಾನೆ(ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರಾ(ಉಪ ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೃದ್ಧಿಮಾನ್ ಸಾಹ, ಕೆಎಸ್ ಭರತ್, ರವಿಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಸರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ ಪ್ರಸಿದ್ಧ್ ಕೃಷ್ಣ