IND VS SA: ಸ್ಪೋಟಿಸಿದ ಸೂರ್ಯ, ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ
ಮಧ್ಯಮ ಕ್ರಮಾಂಕದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಅವರ ಬಿರುಸಿನ ಬ್ಯಾಟಿಂಗ್ ಹಾಗೂ ಅನುಭವಿ ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಗುವಹಾಟಿಯಲ್ಲಿ ನಡೆಯುತ್ತಿರುವ ಎರಡನೇ T-20 ಪಂದ್ಯದಲ್ಲಿ ಟೀಮ್ ಇಂಡಿಯಾ ಸವಾಲಿನ ಗುರಿಯನ್ನು ಪ್ರವಾಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಭರ್ಜರಿ ಆರಂಭವನ್ನು ಮಾಡಿತು. ನಾಯಕ ರೋಹಿತ್ ಶರ್ಮಾ ಹಾಗೂ ಭರವಸೆಯ ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಈ ಜೋಡಿಯನ್ನು ಕಟ್ಟಿ ಹಾಕಲು ದಕ್ಷಿಣ ಆಫ್ರಿಕಾ ಮಾಡಿಕೊಂಡ ಯೋಜನೆ ಕೆಳಗೆಳಗಾಯಿತು. ಈ ಜೋಡಿ 9.5 ಓವರ್ ಗಳಲ್ಲಿ 96 ರನ್ ಗಳ ಸೊಗಸಾದ ಜೊತೆಯಾಟವನ್ನು ನೀಡಿತು. ರೋಹಿತ್ 43 ರನ್ ಬಾರಿಸಿ ಕೇಶವ್ ಮಹರಾಜ್ ಗೆ ವಿಕೆಟ್ ಒಪ್ಪಿಸಿದರು.
ಆರಂಭಿಕ ಕೆ.ಎಲ್ ರಾಹುಲ್ 28 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಸಹಾಯದಿಂದ 57 ರನ್ ಬಾರಿಸಿ ಮಹರಾಜ್ ಗೆ ವಿಕೆಟ್ ಒಪ್ಪಿಸಿದರು.
ಮೂರನೇ ವಿಕೆಟ್ ಗೆ ವಿರಾಟ್ ಕೊಹ್ಲಿ ಜೊತೆಗೂಡಿದ ಮಿಸ್ಟರ್ 360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಮನಮೋಹಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ 42 ಎಸೆತಗಳಲ್ಲಿ 102 ರನ್ ಸೇರಿಸಿತು. ಈ ಜೊತೆಯಾಟದಲ್ಲಿ ಸೂರ್ಯ ಸಿಂಹಪಾಲು ರನ್ ಸಿಡಿಸಿದರು. ಸೂರ್ಯ 22 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ನೆರವಿನಿಂದ 61 ರನ್ ಸಿಡಿಸಿ ಅಬ್ಬರಿಸಿದರು.
ವಿರಾಟ್ ಕೊಹ್ಲಿ ಅಜೇಯ 49 ರನ್ ಹಾಗೂ ದಿನೇಶ್ ಕಾರ್ತಿಕ್ ಅಜೇಯ 17 ರನ್ ಬಾರಿಸಿ ತಂಡದ ಮೊತ್ತ ಹಿಗ್ಗಿಸಿತು. ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್ ಗಳಲ್ಲಿ 3 ವಿಕೆಟ್ ಗೆ 237 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾ ಪರ ಕೇಶವ್ ಮಹರಾಜ್ ಎರಡು ವಿಕೆಟ್ ಪಡೆದರು.
India, South Africa, T-20, Rahul,