IND vs WI: India’s Squad – ವೆಸ್ಟ್ ಇಂಡೀಸ್ ಸರಣಿಗೆ ಟೀಮ್ ಇಂಡಿಯಾದಲ್ಲಿ ಸಿಗುತ್ತಾ ಹೊಸ ಮುಖಗಳಿಗೆ ಅವಕಾಶ ?
ದಕ್ಷಿಣ ಆಫ್ರಿಕಾ ವಿರುದ್ದ ಏಕದಿನ ಮತ್ತು ಟೆಸ್ಟ್ ಸರಣಿಯನ್ನು ಸೋತಿರುವ ಟೀಮ್ ಇಂಡಿಯಾ ಈಗ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಮತ್ತು ಟಿ-20 ಸರಣಿಯನ್ನು ಎದುರು ನೋಡುತ್ತಿದೆ.
ಫೆಬ್ರವರಿ 6ರಿಂದ ಆರಂಭವಾಗಲಿರುವ ಏಕದಿನ ಸರಣಿ ಮತ್ತು ಟಿ-20 ಸರಣಿಗೆ ಆಯ್ಕೆ ಸಮಿತಿಯು ಈ ವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಿದೆ.
ಈಗಾಗಲೇ ನಾಯಕ ರೋಹಿತ್ ಶರ್ಮಾ ಫಿಟ್ ಆಗಿದ್ದಾರೆ. ಹೀಗಾಗಿ ನಾಯಕತ್ವದ ಗೊಂದಲಗಳು ಸದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಇಲ್ಲ. ಆದ್ರೆ ತಂಡಕ್ಕೆ ಯಾರೆಲ್ಲಾ ಆಯ್ಕೆಯಾಗುತ್ತಾರೆ ಅನ್ನೋ ಕುತೂಹಲವಂತೂ ಇದ್ದೇ ಇದೆ.
ಇಲ್ಲಿ ಮುಖ್ಯವಾಗಿ ಆಯ್ಕೆ ಸಮಿತಿಯು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುತ್ತದೆಯಾ ಎಂಬ ಪ್ರಶ್ನೆ ಕೂಡ ಮೂಡುತ್ತಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವುದು ಅನುಮಾನ. ಆದ್ರೆ ವೇಗಿಗಳಾದ ಜಸ್ಪ್ರಿತ್ ಬೂಮ್ರಾ, ಆರ್. ಅಶ್ವಿನ್, ಮಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಹಾಗೇ ಭುವನೇಶ್ವರ್ ತಂಡದಿಂದ ಹೊರಬೀಳುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.
IND vs WI: India’s Squad For The T20I Series Predicted team
ಇನ್ನುಳಿದಂತೆ ತಂಡದಲ್ಲಿ ಹೆಚ್ಚಿನ ಬದಲಾವಣೆ ಏನು ಆಗಲ್ಲ. ಹಾಗೇ ಹೊಸ ಮುಖಗಳಿಗೆ ಅವಕಾಶ ನೀಡಿದ್ರೂ ಅಚ್ಚರಿ ಇಲ್ಲ. ಇನ್ನೊಂದೆಡೆ ಪೃಥ್ವಿ ಶಾ ಮತ್ತೆ ಟೀಮ್ ಇಂಡಿಯಾವನ್ನು ಸೇರಿಕೊಳ್ಳುತ್ತಾರಾ ಅನ್ನೋ ಕುತೂಹಲವೂ ಇದೆ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಗೆ ಟೀಮ್ ಇಂಡಿಯಾದ ಸಂಭಾವ್ಯ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಪೃಥ್ವಿ ಶಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ವಾಷಿಂಗ್ಟನ್ ಸುಂದರ್ ರಿಷಬ್ ಪಂತ್, ಇಶಾನ್ ಕಿಶಾನ್, ಮಹಮ್ಮದ್ ಸೀರಾಜ್ ದೀಪಕ್ ಚಾಹರ್ ಶಾರ್ದೂಲ್ ಥಾಕೂರ್, ಯುಜುವೇಂದ್ರ ಚಾಹಲ್, ಪ್ರಸಿದ್ಧ ಕೃಷ್ಣ,