ಐಸಿಸಿ ವಾರ್ಷಿಕ ಟೆಸ್ಟ್ ಶ್ರೇಯಾಂಕ ಬಿಡುಗಡೆಯಾಗಿದೆ. ವರ್ಷಪೂರ್ತಿ ಟಿ20 ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಮ್ ಇಂಡಿಯಾದ ಮೊದಲ ಸ್ಥಾನ ಪಡೆದುಕೊಂಡಿದೆ. ಟಿ20 ಸರಣಿಯಲ್ಲಿ ಭಾರತ ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಿ ತವರಿನಲ್ಲಿ ಸರಣಿ ಗೆದ್ದಿತ್ತು. ಟೀಮ್ ಇಂಡಿಯಾ ನೀಡಿದ ಈ ಪ್ರದರ್ಶನ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಮೊದಲ ಸ್ಥಾನವನ್ನು ಪಡೆದುಕೊಳ್ಳುವಂತೆ ಮಾಡಿದೆ.
ರೋಹಿತ್ ಶರ್ಮಾ ನೇತೃತ್ವದ ತಂಡ ಆಸ್ಟ್ರೇಲಿಯಾವನ್ನು 9 ಅಂಕಗಳಿಂದ ಹಿಂದಿಕ್ಕಿ ಮೊದಲನೇ ಸ್ಥಾನವನ್ನು ಅಲಂಕರಿಸಿದೆ. ಇನ್ನು ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ಮೊದಲನೇ ಸ್ಥಾನವನ್ನು ಕಾಯ್ದುಕೊಂಡಿದೆ. ಆಸ್ಟ್ರೇಲಿಯಾವು ಟೆಸ್ಟ್ ಕ್ರಿಕೆಟಿನಲ್ಲಿ ಮೊದಲ ಸ್ಥಾನ ಗಳಿಸಿದೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ 119 ರೇಟಿಂಗ್ ಪಡೆದುಕೊಂಡಿದೆ. 128 ಅಂಕ ಪಡೆದಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಪಾಕಿಸ್ತಾನ ಮೊದಲ 5 ಸ್ಥಾನ ಪಡೆದುಕೊಂಡಿದೆ.
ಇನ್ನು ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ 125ನೇ ರೇಟಿಂಗ್ ಅಂಕಗಳ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಭಾರತ 105 ರೇಟಿಂಗ್ ಅಂಕಗಳ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಎರಡನೇ ಮತ್ತು ಮೂರನೇ ಸ್ಥಾನವನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಪಡೆದುಕೊಂಡಿದೆ.
ಟಿ20 ನಲ್ಲಿ ಮೊದಲ ಸ್ಥಾನ ಕಬಳಿಸಿರುವ ಭಾರತ ಇದುವರೆಗೆ 30 ಪಂದ್ಯಗಳಲ್ಲಿ ಮೂಲಕ 8093 ಪಾಯಿಂಟ್ ತೆಗೆದುಕೊಂಡು, 270 ರೇಟಿಂಗ್ ಗಳಿಸಿದೆ. ಎರಡನೇ ಸ್ಥಾನ ಇಂಗ್ಲೆಂಡ್, ಮೂರನೇ ಸ್ಥಾನ ಪಾಕಿಸ್ತಾನ, ನಾಲ್ಕನೇ ಸ್ಥಾನ ದಕ್ಷಿಣ ಆಫ್ರಿಕಾ, ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾ ಇದೆ.