India -England t-20 cricket- ಟಿ-20 ಸರಣಿಗೆ ಟೀಮ್ ಇಂಡಿಯಾ ಪ್ರಕಟ..ರೋಹಿತ್ ಕ್ಯಾಪ್ಟನ್..!
ಇಂಗ್ಲೆಂಡ್ ವಿರುದ್ದದ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಈಗಾಗಲೇ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾವನ್ನು ಟೆಸ್ಟ್ ಪಂದ್ಯದಲ್ಲಿ ಜಸ್ಪ್ರಿತ್ ಬೂಮ್ರಾ ಅವರು ಮುನ್ನಡೆಸಲಿದ್ದಾರೆ.
ಜುಲೈ 7 ರಿಂದ ಆರಂಭವಾಗಲಿರುವ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರಿಷಬ್ ಪಂತ್, ಜಸ್ಪ್ರಿತ್ ಬೂಮ್ರಾ ಮತ್ತು ಶ್ರೇಯಸ್ ಅಯ್ಯರ್ ಅವರು ಆಡುತ್ತಿಲ್ಲ. ಜುಲೈ 9ರಂದು ನಡೆಯಲಿರುವ ಎರಡನೇ ಹಾಗೂ ಮೂರನೇ ಟಿ-20 ಪಂದ್ಯಕ್ಕೆ ಲಭ್ಯರಾಗಲಿದ್ದಾರೆ. India -England t-20 cricket- Rohit back to lead in T20s, ODIs
ಈ ನಡುವೆ ಟೀಮ್ ಇಂಡಿಯಾದ ಟಿ-20 ತಂಡದಲ್ಲಿ ಮಹಮ್ಮದ್ ಶಮಿ ಅವರಿಗೆ ಬಾಗಿಲು ಮುಚ್ಚಿದೆ ಎಂಬುದು ಸ್ಪಷ್ಟವಾಗಿದೆ. ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿಗೆ ಮಹಮ್ಮದ್ ಶಮಿ ಆಯ್ಕೆಯಾಗಿಲ್ಲ. ಹಾಗೇ ನೋಡಿದ್ರೆ, ಕಳೆದ ಟಿ-20 ವಿಶ್ವಕಪ್ ನಂತರ ಮಹಮ್ಮದ್ ಶಮಿ ಅವರು ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಮಹಮ್ಮದ್ ಶಮಿ ಅವರು ಟೀಮ್ ಇಂಡಿಯಾದ ಹಿರಿಯ ಆಟಗಾರನಾಗಿದ್ದಾರೆ. ಅದೇ ರೀತಿ ಶಿಖರ್ ಧವನ್ ಕೂಡ ಟಿ-20 ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ.
ಮೊದಲ ಟಿ-20 ಪಂದ್ಯಕ್ಕೆ ಟೀಮ್ ಇಂಡಿಯಾ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶಾನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷೆಲ್ ಪಟೇಲ್, ಅವೇಶ್ ಖಾನ್, ಆರ್ಶಾದೀಪ್ ಸಿಂಗ್, ಉಮ್ರಾನ್ ಮಲ್ಲಿಕ್
2 ಮತ್ತು 3ನೇ ಟಿ- 20 ಪಂದ್ಯಕ್ಕೆ ಟೀಮ್ ಇಂಡಿಯಾ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶಾನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರಿತ್ ಬೂಮ್ರಾ , ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷೆಲ್ ಪಟೇಲ್, ಉಮ್ರಾನ್ ಮಲ್ಲಿಕ್