India -England Test Match – ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಟೀಮ್ ಇಂಡಿಯಾ

ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಜುಲೈ 1ರಿಂದ 5ರವರೆಗೆ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಕಳೆದ ಬಾರಿಯ ಸರಣಿಯಲ್ಲಿ ಬಾಕಿ ಉಳಿದಿರುವ ಈ ಪಂದ್ಯವನ್ನು ಆಡಲು ಟೀಮ್ ಇಂಡಿಯಾದ ಹಿರಿಯ ಆಟಗಾರರು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ್ದಾರೆ.
ಮಾಜಿ ನಾಯಕ ವಿರಾಟ್ ಕೊಹ್ಲಿ, ಹಿರಿಯ ಆಟಗಾರ ಚೇತೇಶ್ವರ ಪೂಜಾರ, ಮಹಮ್ಮದ್ ಸಿರಾಜ್, ಮಹಮ್ಮದ್ ಶಮಿ, ರವೀಂದ್ರ ಜಡೇಜಾ, ಹನುಮ ವಿಹಾರಿ, ಮತ್ತು ಕೆ.ಎಸ್. ಭರತ್ ಅವರು ಇಂದು ಲಂಡನ್ ಗೆ ತೆರಳಿದ್ದಾರೆ.
ಜುಲೈ1ರಿಂದ ಎಡ್ಜ್ ಬಾಸ್ಟನ್ ನಲ್ಲಿ ಈ ಟೆಸ್ಟ್ ಪಂದ್ಯ ನಡೆಯುಲಿದೆ. ತಂಡದ ಇನ್ನುಳಿದ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯ ನಂತರ ಇಂಗ್ಲೆಂಡ್ ಗೆ ತೆರಳಲಿದ್ದಾರೆ.
ಅದೇ ರೀತಿ ಟೀಮ್ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಸಹಾಯಕ ಸಿಬ್ಬಂದಿಗಳಾದ ವಿಕ್ರಮ್ ರಾಥೋಡ್, ಪರಾಸ್ ಮಹಾಂಬ್ರೆ ಹಾಗೂ ನಾಯಕ ರೋಹಿತ್ ಶರ್ಮಾ ಸೇರಿದಂತೆ ಇನ್ನುಳಿದ ಆಟಗಾರರು ಜೂನ್ 20ರ ನಂತರ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದ್ದಾರೆ. India -England Test Match – Team India leaves for England

2021ರಲ್ಲಿ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ನಾಲ್ಕು ಪಂದ್ಯಗಳ ಸರಣಿಯಲ್ಲಿ ವಿರಾಟ್ ಪಡೆ 2-1ರಿಂದ ಸರಣಿಯನ್ನು ಗೆದ್ದುಕೊಂಡಿತ್ತು. ಆದ್ರೆ ನಿರ್ಣಾಯಕ ಟೆಸ್ಟ್ ಪಂದ್ಯದ ವೇಳೆ ಕೋವಿಡ್ ಸೋಂಕು ಹೆಚ್ಚಾದ ಕಾರಣ ಸರಣಿಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಹೀಗಾಗಿ ಏಕೈಕ ಟೆಸ್ಟ್ ಪಂದ್ಯವನ್ನು ಇದೀಗ ಜುಲೈ 1ರಿಂದ 5ರವರೆಗೆ ನಡೆಸಲಾಗಿದೆ.
ಈ ನಡುವೆ, ಕಳೆದ ಒಂದು ವರ್ಷದ ಅವಧಿಯಲ್ಲಿ ಎರಡು ತಂಡಗಳಲ್ಲೂ ಸಾಕಷ್ಟು ಬದಲಾವಣೆಯಾಗಿದೆ. ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ತಂಡಗಳಲ್ಲಿ ನಾಯಕನತ್ವ ಬದಲಾಗಿದೆ. ಅದೇ ರೀತಿ ಕೋಚ್ ಕೂಡ ಬದಲಾವಣೆಯಾಗಿದೆ.
ಸದ್ಯ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಿದ್ರೆ, ಇಂಗ್ಲೆಂಡ್ ತಂಡವನ್ನು ಬೆನ್ ಸ್ಟ್ರೋಕ್ ಅವರು ಮುನ್ನಡೆಸಲಿದ್ದಾರೆ. ಅದೇ ರೀತಿ ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್. ಇಂಗ್ಲೆಂಡ್ ತಂಡದ ಹೆಡ್ ಕೋಚ್ ಜವಾಬ್ದಾರಿಯನ್ನು ಬ್ರೆಂಡನ್ ಮೆಕಲಮ್ ವಹಿಸಿಕೊಂಡಿದ್ದಾರೆ.
ಇನ್ನು ಏಕೈಕ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಮ್ ಇಂಡಿಯಾ ಅಭ್ಯಾಸ ಪಂದ್ಯವನ್ನು ಕೂಡ ಆಡಲಿದೆ. ಇನ್ನೊಂದೆಡೆ ಟೆಸ್ಟ್ ಪಂದ್ಯದ ವೇಳೆ, ಹಾರ್ದಿಕ್ ಪಾಂಡ್ಯ ಸಾರಥ್ಯದ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಟಿ-20 ಸರಣಿಯನ್ನು ಕೂಡ ಆಡಲಿದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಸಾಕಷ್ಟು ಬಿಝಿ ಶೆಡ್ಯೂಲ್ ನಲ್ಲಿ ಕ್ರಿಕೆಟ್ ಆಡಲಿದೆ. ಮುಖ್ಯವಾಗಿ ಈ ಟೆಸ್ಟ್ ಪಂದ್ಯ, ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ ಪೂಜಾರ ಅವರಿಗೆ ಹೆಚ್ಚಿನ ಮಹತ್ವದ್ದಾಗಿದೆ. ಅದೇ ರೀತಿ ನಾಯಕನಾಗಿ ರೋಹಿತ್ ಶರ್ಮಾ ಅವರಿಗೂ ಅಗ್ನಿ ಪರೀಕ್ಷೆಯಾಗಲಿದೆ.