ಭಾರತ ಮತ್ತು ಜಿಂಬಾಬ್ವೆ ನಡುವಣ ಕೊನೆಯ ಪಂದ್ಯ, ಯಾರಿಗೆ ಸಿಗುತ್ತೆ ಅವಕಾಶ ಇಲ್ಲಿದೆ ನೋಡಿ ಮಾಹಿತಿ
ಭಾರತ ಮತ್ತು ಜಿಂಬಾಬ್ವೆ ನಡುವೆ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಸೋಮವಾರ ಆಗಸ್ಟ್ 22 ರಂದು ನಡೆಯಲಿದೆ. ಈ ಪಂದ್ಯ ಹರಾರೆಯಲ್ಲಿ ಭಾರತೀಯ ಕಾಲಮಾನದ ಪ್ರಕಾರ 12:45 ಕ್ಕೆ ನಡೆಯಲಿದೆ. ಈ ಪಂದ್ಯದಲ್ಲಿ ಶಿಖರ್ ಧವನ್ ಸೇರಿದಂತೆ ಹಲವು ಆಟಗಾರರು ವಿಶ್ರಾಂತಿ ಪಡೆಯಬಹುದು. ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಗೊತ್ತಾ.
ರಾಹುಲ್ ತ್ರಿಪಾಠಿಗೆ ಪದಾರ್ಪಣೆ ಅವಕಾಶ
ಐಪಿಎಲ್ 2022 ರಲ್ಲಿ ಅಬ್ಬರದ ಪ್ರದರ್ಶನ ನೀಡಿದ ರಾಹುಲ್ ತ್ರಿಪಾಠಿ ಮೂರನೇ ಏಕದಿನ ಪಂದ್ಯಕ್ಕೆ ಪಾದರ್ಪಣೆ ಮಾಡುವ ಅವಕಾಶ ಪಡೆಯಬಹುದು. ರಾಹುಲ್ ಟೀಮ್ ಇಂಡಿಯಾಗೆ ಚೊಚ್ಚಲ ಪ್ರವೇಶಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದರು. ಇದಲ್ಲದೇ ಮೂರನೇ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ಕೂಡ ಕೊನೆಯ ಹನ್ನೊಂದರಲ್ಲಿ ಸ್ಥಾನ ಪಡೆಯಬಹುದು.
ಮೊದಲೆರಡು ಏಕದಿನ ಪಂದ್ಯಗಳನ್ನು ಗೆದ್ದು ಈಗಾಗಲೇ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ, ಮೂರನೇ ODI ನಲ್ಲಿ ಅನೇಕ ಆಟಗಾರರು ವಿಶ್ರಾಂತಿ ಪಡೆಯಬಹುದು. ಇದು ಶಿಖರ್ ಧವನ್, ಇಶಾನ್ ಕಿಶನ್, ಅಕ್ಷರ್ ಪಟೇಲ್ ಮತ್ತು ಪ್ರಸಿದ್ಧ ಕೃಷ್ಣ ಅವರಂತಹ ಆಟಗಾರರನ್ನು ಒಳಗೊಂಡಿದೆ. ಮತ್ತೊಂದೆಡೆ, ಬಂಗಾಳದ ಸ್ಪಿನ್ ಆಲ್ ರೌಂಡರ್ ಶಹಬಾಜ್ ಅಹ್ಮದ್ ಚೊಚ್ಚಲ ಅವಕಾಶ ಪಡೆಯಬಹುದು. IPL 2022 ರಲ್ಲಿ, ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಪ್ರದರ್ಶನ ನೀಡಿದ್ದರು.
3ನೇ ಏಕದಿನದಲ್ಲಿ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ದೀಪಕ್ ಚಹಾರ್, ಕುಲದೀಪ್ ಯಾದವ್, ಅವೇಶ್ ಖಾನ್ ಮತ್ತು ಮೊಹಮ್ಮದ್ ಸಿರಾಜ್.
Rahul Tripathi, Team India, india, zimbabwe