ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ. ಎರಡು ಬಲಿಷ್ಠ ತಂಡಗಳ ನಡುವಿನ ಹೋರಾಟ ಕುತೂಹಲ ಕೆರಳಿಸಿದೆ.
ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ನಲ್ಲಿ ಈ ಹೋರಾಟ ನಡೆಯಲಿದೆ. ಭಾರತ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿತ್ತು.
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ವೆಸ್ಟ್ ಇಂಡೀಸ್ ಮೂರು ರನ್ಗಳಿಂದ ರೋಚಕ ಜಯ ಸಾಧಿಸಿತ್ತು. ಬಾಂಗ್ಲಾ ವಿರುದ್ಧದ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿತ್ತು.
ಪಂದ್ಯ ಭಾರತೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ.