India Vs England 3rd odi – ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ – ಬೂಮ್ರಾ ಔಟ್, ಸಿರಾಜ್ ಇನ್..!

ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಅಂತಿಮ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆಯಾಗಿದೆ. ವೇಗಿ ಜಸ್ಪ್ರಿತ್ ಬೂಮ್ರಾ ಬದಲು ಮಹಮ್ಮದ್ ಸೀರಾಜ್ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನುಳಿದಂತೆ ಯಾವುದೇ ಬದಲಾವಣೆ ಇಲ್ಲ
ಇನ್ನೊಂದೆಡೆ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ವಿನ್ನಿಂಗ್ ಕಾಂಬಿನೇಷನ್ ತಂಡವನ್ನೇ ಉಳಿಸಿಕೊಂಡಿದೆ.

ಈಗಾಗಲೇ ಏಕದಿನ ಸರಣಿ 1-1ರಿಂದ ಸಮಬಲಗೊಂಡಿರುವುದರಿಂದ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮಹಮ್ಮದ್ ಶಮಿ, ಮಹಮ್ಮದ ಸೀರಾಜ್, ಯುಜುವೇಂದ್ರ ಚಾಹಲ್, ಪ್ರಸಿದ್ದ್ ಕೃಷ್ಣ.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಜೇಸನ್ ರಾಯ್, ಜೋನಿ ಬೇರ್ ಸ್ಟೋವ್, ಜಾಯ್ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಲಿಯಾನ್ ಲಿವಿಂಗ್ ಸ್ಟನ್, ಮೋಯಿನ್ ಆಲಿ, ಡೇವಿಡ್ ವಿಲ್ಲಿ, ಕ್ರೇರ್ಗ್ ಒವರ್ಟನ್, ಬ್ರೈಡನ್ ಕಾರ್ಸ್, ರೀಸ್ ಟಾಪ್ಲೆ.