India Vs England test match – ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್ ಪ್ರಕಟ- ಜೇಮ್ಸ್ ಆಂಡರ್ಸನ್ ಇನ್..!
ಜುಲೈ 1ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕಳೆದ ವರ್ಷ ರದ್ದುಗೊಂಡಿದ್ದ ಈ ಟೆಸ್ಟ್ ಪಂದ್ಯವನ್ನು ಈಗ ಆಡಿಸಲಾಗುತ್ತಿದೆ.
ಅಂದ ಹಾಗೇ ಇಂಗ್ಲೆಂಡ್ ತಂಡವನ್ನು ಬೆನ್ ಸ್ಟೋಕ್ಸ್ ಮುನ್ನಡೆಸಲಿದ್ದಾರೆ. ಇಂಗ್ಲೆಂಡ್ ಈಗಾಗಲೇ ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಆತ್ಮವಿಶ್ವಾಸದಲ್ಲಿದೆ. ಹಾಗಾಗಿ ಭಾರತ ವಿರುದ್ಧ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ಸಮನಗೊಳಿಸುವ ತವಕದಲ್ಲೂ ಇದೆ. India Vs England test match -England announce playing XI for 5th Test
ಈಗಾಗಲೇ ಇಂಗ್ಲೆಂಡ್ ತಂಡ ಆಡುವ 11ರ ಬಳಗವನ್ನು ಪ್ರಕಟಿಸಿದೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಿಂದ ಹೊರಗುಳಿದಿದ್ದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ಅವರು 11ರ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಜೇಮ್ಸ್ ಆಂಡರ್ಸನ್ 11ರ ಬಳಗವನ್ನು ಸೇರಿಕೊಂಡಿರುವುದರಿಂದ ಜಾಮೀಯ್ ಒವರ್ಟನ್ ಅವರು ತಂಡದಿಂದ ಹೊರಗುಳಿದಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್ ಸ್ಯಾಮ್ ಬಿಲ್ಲಿಂಗ್ಸ್ ಕೂಡ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಯಾಮ್ ಬಿಲ್ಲಿಂಗ್ಸ್ ಅವರಿಗೆ ಬೆನ್ ಪೋಕ್ಸ್ ಅವರು ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.
ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಬೆನ್ ಸ್ಟೋಕ್ಸ್ (ನಾಯಕ), ಝಾಕ್ ಕ್ರಾವ್ಲೇಯ್, ಆಲೆಕ್ಸ್ ಲೀಸ್, ಒಲಿಯ್ ಪೋಪ್, ಜಾಯ್ ರೂಟ್. ಜಾನಿ ಬೇರ್ ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಪೋಟ್ಸ್, ಸ್ಟುವರ್ಟ್ ಬ್ರಾಡ್, ಜಾಕ್ ಲೀಚ್, ಜೇಮ್ಸ್ ಆಂಡರ್ಸನ್