ಟೀಮ್ ಇಂಡಿಯಾ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯದ ಬಗ್ಗೆ ಚರ್ಚೆ ಆಗುತ್ತಿದೆ.
3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಲಖ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯಲಿದೆ.
2 ಮತ್ತು3ನೇ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆಯಲಿದೆ. ಫೆಬ್ರವರಿ 26 ಮತ್ತು 27 ರಂದು ಕೊನೆಯ ಎರಡು ಪಂದ್ಯಗಳು ನಡೆಯಲಿವೆ.