ವೆಸ್ಟ್ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಮೇಲೆ ಟಿ20 ಸರಣಿಯತ್ತ ಟೀಮ್ ಇಂಡಿಯಾ ಗಮನಹರಿಸುತ್ತಿದೆ. ಕೆಲ ದಿನಗಳ ವಿಶ್ರಾಂತಿ ಟೀಮ್ ಇಂಡಿಯಾಕ್ಕೆ ಹೊಸ ಹುರುಪು ತಂದುಕೊಟ್ಟಿದೆ. 3 ಪಂದ್ಯಗಳ ಟಿ20 ಸರಣಿ ಇದಾಗಲಿದೆ.
ಫೆಬ್ರವರಿ 16, ಫೆಬ್ರವರಿ 18 ಮತ್ತು ಫೆಬ್ರವರಿ 20 ಟಿ20 ಸರಣಿಯ 3 ಪಂದ್ಯಗಳು ನಡೆಯಲಿವೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಎಲ್ಲಾ ಪಂದ್ಯಗಳು ನಡೆಯಲಿವೆ.
ಸರಣಿಯ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.