team india t-20 squad- ವಿಂಡೀಸ್ ವಿರುದ್ಧದ ಟಿ-20 ಸರಣಿಗೆ ಟೀಮ್ ಇಂಡಿಯಾ ಪ್ರಕಟ..! ರೋಹಿತ್ ನಾಯಕ, ಕೆ.ಎಲ್. ರಾಹುಲ್ ಉಪನಾಯಕ
ಫೆಬ್ರವರಿ 16ರಿಂದ ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಟಿ-20 ಪಂದ್ಯಗಳ ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.
ಫೆಬ್ರವರಿ 6, 9, 11ರಂದು ಮೂರು ಏಕದಿನ ಪಂದ್ಯಗಳು ಅಹಮದಾಬಾದ್ ನಲ್ಲಿ ನಡೆಯಲಿದೆ. ಹಾಗೇ ಫೆಬ್ರವರಿ 16, 18 ಮತ್ತು 20ರಂದು ಕೊಲ್ಕತ್ತಾದಲ್ಲಿ ಟಿ-20 ಪಂದ್ಯಗಳು ನಡೆಯಲಿವೆ.
ಈಗಾಗಲೇ ಏಕದಿನ ತಂಡದಲ್ಲಿ ಯುವ ಸ್ಪಿನ್ನರ್ ರವಿಬಿಷ್ಣೋಯ್‍ಗೆ ಸ್ಥಾನ ನೀಡಲಾಗಿದೆ. ಹಾಗೇ, ಕುಲದೀಪ್ ಯಾದವ್ ಗೆ ಅವಕಾಶ ನೀಡಲಾಗಿದೆ. ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಆರ್. ಅಶ್ವಿನ್ ಏಕದಿನ ಮತ್ತು ಟಿ-20 ತಂಡಗಳಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿದ್ದಾರೆ.
ಇನ್ನು ಟಿ-20 ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದ್ರೆ ತಂಡದೊಳಗೆ ರವಿ ಬಿಷ್ಣೋಯ್ ಅವರು ಹೊಸ ಮುಖವಾಗಿ ಕಾಣಿಸಿಕೊಂಡಿದ್ದಾರೆ. ಆವೇಶ್ ಖಾನ್ ಮತ್ತು ಹರ್ಷೆಲ್ ಪಟೇಲ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಇವರಿಬ್ಬರು ನ್ಯೂಜಿಲೆಂಡ್ ವಿರುದ್ದದ ಟಿ-20 ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದರು. ಏಕದಿನ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಭುವನೇಶ್ವರ್ ಕುಮಾರ್ ಟಿ-20 ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನುಳಿದಂತೆ ರೋಹಿತ್ ಶರ್ಮಾ ತಂಡದ ಸಾರಥ್ಯ ವಹಿಸಲಿದ್ದಾರೆ. ಕೆ.ಎಲ್. ರಾಹುಲ್ ಉಪನಾಯಕನಾಗಿ ಮುಂದುವರಿಯಲಿದ್ದಾರೆ. ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರವೀಂದ್ರ ಜಡೇಜಾ ಅವರು ವಿಂಡೀಸ್ ಸರಣಿಯಿಂದಲೂ ಹೊರಗುಳಿದಿದ್ದಾರೆ.
ವೆಸ್ಟ್ ಇಂಡೀಸ್ ಸರಣಿಗೆ ಟೀಮ್ ಇಂಡಿಯಾದ ಟಿ-20 ತಂಡ
ರೋಹಿತ್ ಶರ್ಮಾಋ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಇಶಾನ್ ಕಿಶಾನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್, ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಥಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮಹಮ್ಮದ್ ಸೀರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್.