ಟೀಮ್ ಇಂಡಿಯಾ ಮತ್ತು ವೆಸ್ಟ್ಇಂಡೀಸ್ ನಡುವಿನ ಟಿ20 ಸರಣಿಗೆ ರೋಚಕ ಆರಂಭ ಸಿಕ್ಕಿದೆ. ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಗೆಲುವು ದಾಖಲಿಸಿ 3 ಪಂದ್ಯಗಳ ಸರಣಿಯಲ್ಲಿ1-0 ಮುನ್ನಡೆ ಪಡೆದಿದೆ. 2ನೇ ಪಂದ್ಯದ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ್ದ ಟೀಮ್ ಇಂಡಿಯಾ ಟಿ20ಯಲ್ಲೂ ಅದೇ ಗುರಿ ಇಟ್ಟುಕೊಂಡಿದೆ. ಎರಡನೇ ಪಂದ್ಯವೂ ಕೊಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆಯಲಿದೆ.
2ನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಡ್ಯೂ ಫ್ಯಾಕ್ಟರ್ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ.
ಮೊದಲ ಟಿ20 ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಗೆದ್ದುಕೊಂಡಿತು. ಮೊದಲ ಟಿ20 ಪಂದ್ಯ ಆಡಿದ್ದ ರವಿಬಿಷ್ಣೋಯಿ ಪಂದ್ಯ ಶ್ರೇಷ್ಠರಾಗಿದ್ದರು.