ಮುಂಬರುವ ನ್ಯೂಜಿಲೆಂಡ್ ಸರಣಿಗೆ ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ವಿಶ್ರಾಂತಿ ನೀಡಲಾಗಿದ್ದು ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸಲಿದ್ದಾರೆ.
ಟಿ20 ವಿಶ್ವಕಪ್ ಸೆಮಿಫೈನಲ್ಲಿ ಸೋತು ಹೊರ ಬಿದ್ದಿರುವ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ಗಳಿಗೆ ಅಗತ್ಯವಾಗಿ ವಿಶ್ರಾಂತಿ ಬೇಕಿದೆ. ಕೋಚ್ ರಾಹುಲ್ ದ್ರಾವಿಡ್ ಅವರ ಸಹಾಯಕ ಕೋಚ್ಗಳಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಮತ್ತು ಬೌಲಿಂಗ್ ಕೋಚ್ ಪರಸ್ ಮಾಂಬ್ರಿಗೆ ವಿಶ್ರಾಂತಿ ನೀಡಲಾಗಿದೆ.
ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಜೊತೆಗೆ ಲೆಗ್ ಸ್ಪಿನ್ನರ್ ಸಾಯಿರಾಜ್ ಹಾಗೂ ಹೃಷಿಕೇಶ್ ಕಾನಿಟ್ಕರ್ ಸಹಾಯಕ ಕೋಚ್ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
ಎನ್ ಸಿಎ ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಇದೇ ಮೊದಲ ಬಾರಿಗೆ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಹಿಂದೆ ಐರರ್ಲೆಂಡ್, ಜಿಂಬಾಬ್ವೆ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗಳಲ್ಲಿ ಆಡಿದ್ದಾರೆ.

ಈ ಸರಣಿಯಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೆ.ಎಲ್.ರಾಹುಲ್ಗೆ ವಿಶ್ರಾಂತಿ ನೀಡಲಾಗಿದೆ. ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ತಂಡವನ್ನು ಶಿಖರ್ ಧವನ್ ಸಾರಥ್ಯದಲ್ಲಿ ತಂಡ ಅಡಲಿದೆ.