ಇನ್ನು ಕೆಲವೇ ದಿನಗಳಲ್ಲಿ ಶ್ರೀಲಂಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ. ಭಾರತ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಸರಣಿ ಆಡಲಿದೆ.
ಜ.3ರಿಂದ ಆರಂಭವಾಗಲಿರುವ ಪ್ರವಾಸಕ್ಕೆ ಲಂಕಾ ಕ್ರಿಕೆಟ್ ಮಂಡಳಿ ಶ್ರೀಲಂಕಾ ತಂಡವನ್ನು ಪ್ರಕಟಿಸಿದೆ.
ಜ.3ರಿಂದ ಟಿ20 ಸರಣಿ ಆರಂಭವಾಗಲಿದೆ.ಏಕದಿನ ಸರಣಿ ಜ.10ರಿಂದ ಆರಂಭವಾಗಲಿದೆ.
ಟಿ20 ಸರಣಿ ಮುಂಬೈ, ಪುಣೆ ಮತ್ತು ರಾಜ್ ಕೋಟ್ನಲ್ಲಿ ನಡೆಯಲಿದೆ. ಇದಾದ ಬಳಿಕ ಏಕದಿನ ಸರಣಿ ಗುವಾಹಟಿ,ಕೋಲ್ಕತ್ತಾ ಮತ್ತು ತಿರುವನಂತಪುರಂನಲ್ಲಿ ಸರಣಿ ನಡೆಯಲಿದೆ.
ಶ್ರೀಲಂಕಾ ತಂಡ:ದಾಸುನ್ ಶನಕಾ (ನಾಯಕ), ಪಾತುಮ್ ನಿಸ್ಸಾಂಕ, ಆವಿಷ್ಕಾ ಫೆರ್ನಾಂಡೊ,ಸಧೀರ ಸಮರವಿಕ್ರಮ, ಕುಸಾಲ್ ಮೆಂಡೀಸ್, ಭಾನುಕಾ ರಾಜಪಕ್ಸೆ, ಚರಿತ್ ಅಸಲಂಕಾ, ಧನಂಜಯ ಡಿಸಿಲ್ವಾ, ವನಿಂದು ಹಸರಂಗ, ಮಹೀಶ್ ತೀಕ್ಷ್ಣ, ಜೆಫ್ರಿ ವಾಂಡರ್ಸ್, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ,ಕಸುನ್ ರಜಿತ, ನುವಾನಿಡು ಫೆರ್ನಾಂಡೊ, ದುನಿತ್ ವೆಲಾಲಗೆ, ಪ್ರಮೋದ್ ಮಧುಶನ್,ಲಹಿರು ಕುಮಾರ್, ನುವಾನ್ ಕುರಶೇಕರ್.