ಐಪಿಎಲ್ ತಾಣಗಳ ಬಗ್ಗೆ ಬಿಸಿಸಿಐ ಅಧ್ಯಕ್ಷರು ಹೇಳಿದ್ದು ಹೀಗೆ..?
15ನೇ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ ಕೊನೆಯ ವಾರದಲ್ಲಿ ಆರಂಭವಾಗುವುದು ಬಹುತೇಕ ಪಕ್ಕಾ. ಕೋವಿಡ್ ಮೂರನೇ ಅಲೆಯ ಆತಂಕದ ನಡುವೆಯೂ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಆಯೋಜನೆ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಫೆಬ್ರವರಿ 12 ಮತ್ತು 13ರಂದು ಐಪಿಎಲ್ ಮೆಗಾ ಹರಾಜು ಬೆಂಗಳೂರಿನಲ್ಲಿ ನಡೆಯಲಿದೆ. ಈಗಾಗಲೇ ಹತ್ತು ಫ್ರಾಂಚೈಸಿಗಳು ಹರಾಜಿನಲ್ಲಿ ಯಾವ ಆಟಗಾರನನ್ನು ಎಷ್ಟು ಮೊತ್ತಕ್ಕೆ ಖರೀದಿ ಮಾಡಬೇಕು ಎಂಬುದರ ಬಗ್ಗೆ ಪ್ಲಾನ್ ಮಾಡಿಕೊಳ್ಳುತ್ತಿವೆ. ಒಟ್ಟು 33 ಆಟಗಾರರು ತಂಡದಲ್ಲಿ ರಿಟೇನ್ ಆಗಿದ್ದಾರೆ. ಇನ್ನುಳಿದ ಆಟಗಾರರನ್ನು ಹರಾಜಿನಲ್ಲಿ ಫ್ರಾಂಚೈಸಿಗಳು ಆಟಗಾರರನ್ನು ಖರೀದಿ ಮಾಡಲಿವೆ.
IPL 2022 – Sourav Ganguly Hints At Venues For League Matches
ಈ ನಡುವೆ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ 2022ರ ಐಪಿಎಲ್ ಟೂರ್ನಿಯ ತಾಣಗಳ ಬಗ್ಗೆ ಸುಳಿವು ನೀಡಿದ್ದಾರೆ. ಮಹಾರಾಷ್ಟ್ರದ ಮುಂಬೈ ಮತ್ತು ಪುಣೆಯಲ್ಲಿ ಪಂದ್ಯಗಳನ್ನು ಆಯೋಜನೆ ಮಾಡಲು ಪ್ಲಾನ್ ಮಾಡಿಕೊಂಡಿವೆ. ನಾಕೌಟ್ ಹಂತದ ಪಂದ್ಯಗಳನ್ನು ನಂತರ ನಿರ್ಧರಿಸಲಾಗುವುದು ಎಂದು ಗಂಗೂಲಿ ಹೇಳಿದ್ದಾರೆ.
ಇದೇ ವೇಳೆ ಸೌರವ್ ಗಂಗೂಲಿ ಅವರು ದೇಸಿ ಟೂರ್ನಿ ರಣಜಿ ಟೂರ್ನಿಯ ಬಗ್ಗೆಯೂ ಮಾತನಾಡಿದ್ದಾರೆ. ಕಳೆದ ವರ್ಷ ರಣಜಿ ಟೂರ್ನಿಯನ್ನು ರದ್ದುಗೊಳಿಸಲಾಗಿತ್ತು. ಈ ಬಾರಿ ಎರಡು ಹಂತಗಳಲ್ಲಿ ರಣಜ ಟೂರ್ನಿಯನ್ನು ಆಯೋಜನೆ ಮಾಡಲಾಗುವುದು. ಭಾರತೀಯ ಕ್ರಿಕೆಟ್ ನಲ್ಲಿ ರಣಜಿ ಟೂರ್ನಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕೋವಿಡ್ ಸೋಂಕಿನ ಆತಂಕದ ನಡುವೆಯೂ ಟೂರ್ನಿಯನ್ನು ಆಯೋಜನೆ ಮಾಡಲು ಬಿಸಿಸಿಐ ಎಲ್ಲಾ ರೀತಿಯ ಯೋಜನೆಗಳನ್ನು ಹಾಕಿಕೊಂಡಿದೆ. ಅಲ್ಲದೆ ಆಟಗಾರರ ಸುರಕ್ಷತೆಯ ಬಗ್ಗೆಯೂ ಆದ್ಯತೆ ನೀಡಲಿದೆ ಎಂದು ಗಂಗೂಲಿ ಹೇಳಿದ್ದಾರೆ.