ಕಗೀಸೋ ರಬಾಡ(4/33) ಆಕ್ರಮಣಕಾರಿ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಟೈಟನ್ಸ್, ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ನಡುವೆಯೂ ಸಾಯಿ ಸುದರ್ಶನ್(64*) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ವಿರುದ್ಧ – ರನ್‌ಗಳಿಸಿದೆ.
ಡಿ.ವೈ.ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬ್ಯಾಟಿಂಗ್ ವೈಫಲ್ಯಕ್ಕೆ ಸಿಲುಕಿತು. ಪರಿಣಾಮ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್‌ಗಳಿಸಿತು. ಗುಜರಾತ್ ಪರ ಸಾಯಿ ಸುದರ್ಶನ್(64*), ವೃದ್ಧಿಮಾನ್ ಸಾಹ(21) ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾದರು. ಪಂಜಾಬ್ ಪರ ಕಗೀಸೋ ರಬಾಡ(4/33) ಉತ್ತಮ ಬೌಲಿಂಗ್ ಪ್ರದರ್ಶಿಸಿದರು.

ಟೈಟನ್ಸ್ ಬ್ಯಾಟಿಂಗ್ ವೈಫಲ್ಯ:
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್ ಟೈಟನ್ಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಶುಭ್ಮನ್ ಗಿಲ್(9) ಬಹುಬೇಗ ವಿಕೆಟ್ ಒಪ್ಪಿಸಿದರು. ಇದಾದ ಕೆಲವೇ ಹೊತ್ತಿನಲ್ಲಿ ವೃದ್ಧಿಮಾನ್ ಸಾಹ(21) ಹಾಗೂ ನಾಯಕ ಹಾರ್ದಿಕ್ ಪಾಂಡ್ಯ(1) ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ೀ ಹಂತದಲ್ಲಿ ಕಣಕ್ಕಿಳಿದ ಡೇವಿಡ್ ಮಿಲ್ಲರ್(11) ಉತ್ತಮ ಆರಂಭ ಪಡೆದರು, ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ಎಡವಿದರು. ಪರಿಣಾಮ ಗುಜರಾತ್ 67 ರನ್‌ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಸುದರ್ಶನ್ ಅರ್ಧಶತಕ:
ಈ ಹಂತದಲ್ಲಿ ಜೊತೆಯಾದ ಸಾಯಿ ಸುದರ್ಶನ್ 64* ರನ್(50 ಬಾಲ್, 5 ಬೌಂಡರಿ, 1 ಸಿಕ್ಸ್) ಅದ್ಭುತ ಆಟವಾಡಿದರು. ಪಂಜಾಬ್ ಕಿಂಗ್ಸ್ ಬೌಲರ್‌ಗಳಿಗೆ ದಿಟ್ಟ ಉತ್ತರ ನೀಡಿದ ಸುದರ್ಶನ್, ಐಪಿಎಲ್‌ನ ಚೊಚ್ಚಲ ಅರ್ಧಶತಕ ಬಾರಿಸಿ ಮಿಂಚಿದರು. ಅಲ್ಲದೇ 5ನೇ ವಿಕೆಟ್‌ಗೆ ರಾಹುಲ್ ತೇವಾಟಿಯ(11) ಜೊತೆಗೂಡಿ 45(30) ರನ್‌ಗಳಿಸುವ ಮೂಲಕ ತಂಡದ ಮೊತ್ತ ಹೆಚ್ಚಿಸಿದರು. 6ನೇ ಕ್ರಮಾಂಕದಲ್ಲಿ ಬಂದ ರಶೀದ್ ಖಾನ್(0), ಪ್ರದೀಪ್ ಸಾಂಗ್ವಾನ್(2), ಲೊಕ್ಕಿ ಫೆರ್ಗುಸನ್(5) ಬಹುಬೇಗನೆ ಔಟಾಗಿ ನಿರಾಸೆ ಮೂಡಿಸಿದರು.

ರಬಾಡ ಮಾರಕ ದಾಳಿ:
ಪಂಜಾಬ್ ಪರ ಬೌಲರ್‌ಗಳು ಸಾಂಘಿಕ ಪ್ರದರ್ಶನದ ಮೂಲಕ ಗುಜರಾತ್ ಬ್ಯಾಟ್ಸ್‌ಮನ್‌ಗಳಿಗೆ ಕಡಿವಾಣ ಹಾಕಿದರು. ಪ್ರಮುಖವಾಗಿ ಪಂಜಾಬ್ ಕಿಂಗ್ಸ್ ಪರ ಮಾರಕ ದಾಳಿ ನಡೆಸಿದ ಕಗೀಸೋ ರಬಾಡ(4/33) ಅದ್ಭುತ ಬೌಲಿಂಗ್ ಪ್ರದರ್ಶಿಸಿದರೆ. ರಿಶಿ ಧವನ್(1/26), ಅರ್ಶದೀಪ್ ಸಿಂಗ್(1/35), ಲಿವಿಂಗ್‌ಸ್ಟೋನ್(1/15) ಹಾಗೂ ಉತ್ತಮ ಬೌಲಿಂಗ್ ಪ್ರದರ್ಶಿಸಿದರು.