15ನೇ ಆವೃತ್ತಿಯ ಐಪಿಎಲ್ ಮಹಾಸಮರದ ಕ್ವಾಲಿಫೈಯರ್-2 ಹಣಾಹಣಿಗೆ ಕ್ಷಣಗಣನೆ ಶುರುವಾಗಿದೆ. ಮಹತ್ವದ ಕದನದಲ್ಲಿ ಜಿದ್ದಾಜಿದ್ದಿನ ಕಾದಾಟ ನಡೆಸಲು ರಾಜಸ್ಥಾನ್ ರಾಯಲ್ಸ್ v ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಜ್ಜಾಗಿವೆ.
ಎರಡು ತಂಡಗಳ ನಡುವಿನ “ರಾಯಲ್ಸ್ ಬ್ಯಾಟಲ್”ಗಾಗಿ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಸಜ್ಜಾಗಿದೆ. 2022ರ ಐಪಿಎಲ್ ಪ್ರಶಸ್ತಿ ಗೆಲುವಿಗೆ ಉಭಯ ತಂಡಗಳು ಕೆಲವೇ ಮೆಟ್ಟಿಲು ದೂರವಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜೂ ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಂದಿನ ರೋಚಕ ಹೋರಾಟಕ್ಕಾಗಿ ಎರಡು ತಂಡಗಳು ತಮ್ಮದೇ ರಣತಂತ್ರ ರೂಪಿಸಿಕೊಂಡಿವೆ. ಕ್ವಾಲಿಫೈಯರ್-2 ಪಂದ್ಯಕ್ಕಾಗಿ ರಾಜಸ್ಥಾನ್ ಹಾಗೂ ಬೆಂಗಳೂರು ತಂಡಗಳು ಯಾವುದೇ ಬದಲಾವಣೆ ಇಲ್ಲದೇ ಆಡುತ್ತಿರುವುದು ವಿಶೇಷ.
ತಂಡಗಳ ಮುಖಾಮುಖಿ: ಉಭಯ ತಂಡಗಳು ಐಪಿಎಲ್ನಲ್ಲಿ 26 ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಪಂದ್ಯಗಳಲ್ಲಿ ಗೆಲುವು ಕಂಡಿದ್ದರೆ, ರಾಜಸ್ಥಾನ್ ರಾಯಲ್ಸ್ 11 ಪಂದ್ಯದಲ್ಲಿ ಜಯದ ನಗೆಬೀರಿದೆ.
ಉಭಯ ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸ್ಸಿ(ನಾಯಕ), ರಜತ್ ಪತಿದಾರ್, ಮಹಿಪಾಲ್ ಲೋಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಜೋಶ್ ಹೆಜ಼ಲ್ವುಡ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜಾಸ್ ಬಟ್ಲರ್, ಸಂಜೂ ಸ್ಯಾಮ್ಸನ್(ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ಆರ್. ಅಶ್ವಿನ್, ಟ್ರೆಂಟ್ ಬೋಲ್ಟ್, ಪ್ರಸಿದ್ಧ್ ಕೃಷ್ಣ, ಒಬೇಡ್ ಮೆಕಾಯ್, ಯುಜುವೇಂದ್ರ ಚಹಲ್.