IPL 2022- RR Vs LSG – ರಾಜಸ್ತಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ ಇಲೆವೆನ್ – Lucknow Super Giants Playing XI
![IPL 2022- RR Vs LSG - ರಾಜಸ್ತಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ ಇಲೆವೆನ್ - Lucknow Super Giants Playing XI 3 rr vs lsg ipl 2022 sports karnataka](http://sportskarnataka.com/wp-content/uploads/2022/05/rr-vs-lsg.jpg)
ಚೊಚ್ಚಲ ಟೂರ್ನಿಯಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದೆ. ನಾಯಕ ಕೆ.ಎಲ್. ರಾಹುಲ್ ಸಾರಥ್ಯದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬಹುತೇಕ ಪ್ಲೇ ಆಫ್ ಎಂಟ್ರಿಯನ್ನು ಖಚಿತಪಡಿಸಿಕೊಂಡಿದೆ. ಅಧಿಕೃತವಾಗಿ ಖಚಿತಪಡಿಸಿಕೊಳ್ಳಲು ಇನ್ನುಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆಲ್ಲಬೇಕು.
ಹೀಗಾಗಿ 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 63ನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವನ್ನೇ ಎದುರು ನೋಡುತ್ತಿದೆ.
ಹಾಗೇ ನೋಡಿದ್ರೆ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಸೂಪರ್ ಸ್ಟಾರ್ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿಲ್ಲ. ಆದ್ರೆ ಸೂಪರ್ ಸ್ಟಾರ್ ಆಟಗಾರರು ಹೊರಹೊಮ್ಮುತ್ತಿದ್ದಾರೆ. ಸಂಘಟಿತ ಆಟದ ಮೂಲಕವೇ ಗಮನ ಸೆಳೆದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ನಾಯಕ ಕೆ.ಎಲ್. ರಾಹುಲ್ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ.
ಮುಖ್ಯವಾಗಿ ಬ್ಯಾಟಿಂಗ್ ನಲ್ಲಿ ಕ್ವಿಂಟನ್ ಡಿ ಕಾಕ್ ಜವಾಬ್ದಾರಿಯುತವಾಗಿ ಆಡುತ್ತಿದ್ದಾರೆ. ಕ್ರಿಸ್ ಗೆ ಅಂಟಿಕೊಂಡ್ರೆ ಕೆ.ಎಲ್. ರಾಹುಲ್ ಅಪಾಯಕಾರಿ ಬ್ಯಾಟ್ಸ್ ಮೆನ್. ಇನ್ನು ದೀಪಕ್ ಹೂಡ, ಮಾರ್ಕಸ್ ಸ್ಟೋನಿಸ್, ಕೃನಾಲ್ ಪಾಂಡ್ಯ ಏಕಾಂಗಿಯಾಗಿಯೇ ಪಂದ್ಯದ ಗತಿಯನ್ನು ಬದಲಾಯಿಸುವಂತಹ ಸಾಮಥ್ರ್ಯವನ್ನು ಹೊಂದಿದ್ದಾರೆ. ಆಯುಷ್ ಬಡೋನಿ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ಜೇಸನ್ ಹೋಲ್ಡರ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ನಲ್ಲೂ ಗಮನಹರಿಸಬೇಕಿದೆ. IPL 2022- RR Vs LSG -Lucknow Super Giants Playing XI
![IPL 2022- RR Vs LSG - ರಾಜಸ್ತಾನ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ ಇಲೆವೆನ್ - Lucknow Super Giants Playing XI 4 LUCKNOW SUPER GIANTS](http://sportskarnataka.com/wp-content/uploads/2022/04/LUCKNOW-SUPER-GIANTS-1.jpg)
ಹಾಗೇ ಬೌಲಿಂಗ್ ನಲ್ಲಿ ಆವೇಶ್ ಖಾನ್ ಮತ್ತು ಮೋಶಿನ್ ಖಾನ್, ಕರಣ್ ಶರ್ಮಾಇನ್ನಷ್ಟು ಪರಿಣಾಮಕಾರಿಯಾಗಬೇಕಿದೆ. ದುಶ್ಮಂತ್ ಚಾಮೀರ ವೇಗದ ಜೊತೆ ಲಯ ಬದ್ಧವಾಗಿ ಬೌಲಿಂಗ್ ಮಾಡಬೇಕಿದೆ.
ಒಟ್ಟಿನಲ್ಲಿ ಸಂಘಟಿತ ಆಟದತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡ ಚಿತ್ತವನ್ನಿಡಬೇಕಿದೆ. ಕಳೆದ ಪಂದ್ಯದಲ್ಲಿ ಸೋತಿರುವ ರಾಹುಲ್ ಬಳಗ ಮತ್ತೆ ಗೆಲುವಿನ ಲಯ ಕಂಡುಕೊಳ್ಳಬೇಕಿದೆ. ಅಲ್ಲದೆ, ರಾಜಸ್ತಾನ ವಿರುದ್ಧ ಸೇಡು ತೀರಿಸಿಕೊಳ್ಳುವ ತವಕದಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡವಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡ ಆಡಿರುವ 12 ಪಂದ್ಯಗಳಲ್ಲಿ ಎಂಟು ಪಂದ್ಯಗಳನ್ನು ಗೆದ್ದುಕೊಂಡಿದೆ. ನಾಲ್ಕು ಪಮದ್ಯಗಳಲ್ಲಿ ಸೋತಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಒಟ್ಟಿನಲ್ಲಿ ಸೂಪರ್ ಸಂಡೆಯ ಸೂಪರ್ ಮ್ಯಾಚ್ ನಲ್ಲಿ ಲಕ್ನೋ ಮತ್ತು ರಾಜಸ್ತಾನ ತಂಡಗಳು ಕಾದಾಟ ನಡೆಸಲಿವೆ.
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ ಇಲೆವೆನ್
ಕೆ.ಎಲ್. ರಾಹುಲ್ (ನಾಯಕ)
ಕ್ವಿಂಟನ್ ಡಿ ಕಾಕ್
ದೀಪಕ್ ಹೂಡಾ
ಮಾರ್ಕಸ್ ಸ್ಟೋನಿಸ್
ಆಯುಷ್ ಬಡೋನಿ
ಕೃನಾಲ್ ಪಾಂಡ್ಯ
ಜೇಸನ್ ಹೋಲ್ಡರ್
ಕರಣ್ ಶರ್ಮ
ಆವೇಶ್ ಖಾನ್
ದುಶ್ಮಂತ್ ಚಾಮೀರ
ಮೋಶಿನ್ ಖಾನ್