ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ರಾಜಸ್ಥಾನ್ ರಾಯಲ್ಸ್ ಗೆಲುವಿಗೆ ಕಾರಣವಾದ ಯಶಸ್ವಿ ಜೈಸ್ವಾಲ್, ತಮ್ಮ ಪ್ರದರ್ಶನವನ್ನ ವಿಶೇಷ ವ್ಯಕ್ತಿಗೆ ಅರ್ಪಿಸಿದ್ದಾರೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕರುಣ್ ನಾಯರ್ ಬದಲಾಗಿ ತಂಡದಲ್ಲಿ ಸ್ಥಾನ ಯುವ ಆಟಗಾರ ಯಶಸ್ವಿ ಜೈಸ್ವಾಲ್, ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಜವಾಬ್ದಾರಿಯ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್, 41 ಬಾಲ್‌ಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 68 ರನ್‌ಗಳ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಯಶಸ್ವಿ ಜೈಸ್ವಾಲ್ ಅವರ ಬೊಂಬಾಟ್ ಆಟದಿಂದ ರಾಜಸ್ಥಾನ್ ರಾಯಲ್ಸ್, 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ರಾಜಸ್ಥಾನ್ ರಾಯಲ್ಸ್ ಗೆಲುವಿನ ಹೀರೋ ಆಗಿ ಮಿಂಚಿದ ಯಶಸ್ವಿ ಜೈಸ್ವಾಲ್, ನಿರೀಕ್ಷಿಯಂತೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ತಮಗೆ ದೊರೆತ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ರಾಜಸ್ಥಾನ್ ರಾಯಲ್ಸ್ ತಂಡದ ಹೆಡ್ ಆಫ್ ಕ್ರಿಕೆಟ್ ಜುಬಿನ್ ಭರುಚಾ ಅವರಿಗೆ ಅರ್ಪಿಸಿದ್ದಾರೆ. ಪಂದ್ಯದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದು ಮಾತನಾಡಿದ ಜೈಸ್ವಾಲ್, “ನಿಜಕ್ಕೂ ನನಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ದೊರೆಯಲಿದೆ ಎಂದು ಭಾವಿಸಿರಲಿಲ್ಲ. ಪ್ರತಿ ಬಾರಿ ಬ್ಯಾಟಿಂಗ್ ಹೋಗುವುದು ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತೇ. ನನ್ನ ಈ ಪ್ರದರ್ಶನವನ್ನ ಜುಬಿನ್ ಸರ್‌ಗೆ ಅರ್ಪಿಸುತ್ತೇನೆ. ಎಲ್ಲಾ ಟೈಮ್‌ನಲ್ಲೂ ನನ್ನ ಬೆನ್ನಿಗೆ ನಿಲ್ಲುವ ಅವರು ಪ್ರತಿದಿನ ನನಗೆ ಪ್ರೋತ್ಸಾಹ ನೀಡುತ್ತಾರೆ” ಎಂದಿದ್ದಾರೆ.
ಯಶಸ್ವಿ ಜೈಸ್ವಾಲ್ ಅವರ ಉತ್ತಮ ಪ್ರದರ್ಶನದ ನೆರವಿನಿಂದ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್, 14 ಅಂಕದೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 3ನೇ ಸ್ಥಾನದಲ್ಲಿದೆ.