ಐಪಿಎಲ್ ಟೂರ್ನಿಯ ಕಳೆದ ಎರಡು ಆವೃತ್ತಿಯಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ನಿರೀಕ್ಷೆಯಲ್ಲಿದ್ದ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಕಡೆಗೂ ಐಪಿಎಲ್ ಪಾದಾರ್ಪಣೆ ಮಾಡಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಕೊಲ್ಕತ್ತಾ ನೈಟ್ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ಗೆ ಎಂಟ್ರಿಕೊಟ್ಟಿದ್ದಾರೆ. 2021ರ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನ ಸೇರಿಕೊಂಡ ಅರ್ಜುನ್ ತೆಂಡುಲ್ಕರ್, ತಂಡದ ಸಹ ಆಟಗಾರರೊಂದಿಗೆ ಕಾಲ ಕಳೆಯುತ್ತಿದ್ದರು, ಕಳೆದೆರಡು ಸೀಸನ್ನಲ್ಲಿ ಕಣಕ್ಕಿಳಿಯುವ ಅವಕಾಶ ಪಡೆಯಲಿಲ್ಲ. ನೆಟ್ ಪ್ರ್ಯಾಕ್ಟಿಸ್ಗಳಲ್ಲಿ ಹಲವು ಸಂದರ್ಭದಲ್ಲಿ ಕಾಣಿಸಿಕೊಳ್ಳುತ್ತಿದ್ದ ಅರ್ಜುನ್ ತೆಂಡುಲ್ಕರ್, ತಂಡದ ಪ್ಲೇಯಿಂಗ್ ಇಲವೆನ್ನಲ್ಲಿ ಮಾತ್ರ ಸ್ಥಾನ ಪಡೆದಿರಲಿಲ್ಲ.
ಆದರೆ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಥಾನ ಪಡೆಯುವ ಎಲ್ಲಾ ಅವಕಾಶಗಳು ಅರ್ಜುನ್ ತೆಂಡುಲ್ಕರ್ಗೆ ಇತ್ತು. ಪ್ರಮುಖವಾಗಿ ಮುಂಬೈ ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಮುಂಬೈ ತಂಡವನ್ನ ಕಾಡುತ್ತಿದೆ. ಹೀಗಾಗಿ ಇವರ ಸ್ಥಾನದಲ್ಲಿ ಅರ್ಜುನ್ ತೆಂಡುಲ್ಕರ್ಗೆ ಆಡುವ ಸಾಧ್ಯತೆ ಇತ್ತು. ಈ ಎಲ್ಲಾ ನಿರೀಕ್ಷೆಗಳು ಕಡೆಗೂ ನಿಜವಾಗಿದ್ದು, ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್ಗೆ ಪಾದಾರ್ಪಣೆ ಮಾಡಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಹರ್ಡಲ್ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮ, ಅರ್ಜುನ್ ತೆಂಡುಲ್ಕರ್ ಅವರಿಗೆ ಕ್ಯಾಪ್ ನೀಡಿ ಶುಭಕೋರಿದರು. 16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಅರ್ಜುನ್ ತೆಂಡುಲ್ಕರ್ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುವ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಾಗಿತ್ತು. ಮುಂಬೈ ತಂಡದ ನಾಯಕ ರೋಹಿತ್ ಶರ್ಮ ಹಾಗೂ ತಂಡದ ಕೋಚ್ ಮಾರ್ಕ್ ಬೌಚ್ಚರ್ ಸಹ ಅರ್ಜುನ್ ತೆಂಡುಲ್ಕರ್ ತಂಡದಲ್ಲಿ ಆಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು.
Arjun receiving his debut 🧢 from Skipper Ro – ro lo, sab! 🥹💙#OneFamily #MumbaiIndians #MumbaiMeriJaan #ESADay #MIvKKRpic.twitter.com/D4xmze04N1
— Mumbai Indians (@mipaltan) April 16, 2023
ದೇಸಿ ಕ್ರಿಕೆಟ್ನಲ್ಲಿ ಮುಂಬೈನಿಂದ ಗೋವಾ ತಂಡಕ್ಕೆ ಸೇರ್ಪಡೆ ಆಗಿರುವ ಅರ್ಜುನ್ ತೆಂಡುಲ್ಕರ್, 2022-23ರ ಸಾಲಿನ ಡೊಮೆಸ್ಟಿಕ್ ಕ್ರಿಕೆಟ್ನಲ್ಲಿ ಸಾಕಷ್ಟು ಪಂದ್ಯಗಳನ್ನ ಆಡಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿದ್ದ ಅರ್ಜುನ್ ತೆಂಡುಲ್ಕರ್, ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಶತಕದ ಜೊತೆಗೆ 223 ರನ್ಗಳಿಸಿ, 7 ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.
IPL 2023, Mumbai Indians, Arjun Tendulkar, Rohit Sharma, Sports Karnataka