ಐಪಿಎಲ್ನ 16ನೇ ಆವೃತ್ತಿಯ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಮಹತ್ವದ ಪಂದ್ಯಕ್ಕೆ ಎರಡು ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿವೆ. ತವರು ಅಭಿಮಾನಿಗಳ ಎದುರು ನಡೆಯುತ್ತಿರುವ ಮಹತ್ವದ ಹಣಾಹಣಿಯಲ್ಲಿ ಆರ್ಸಿಬಿ, ಅದ್ಭುತ ಪ್ರದರ್ಶನದ ಮೂಲಕ ಗೆಲುವಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸುವ ನಿರೀಕ್ಷೆಯಲ್ಲಿದೆ.
ಐಪಿಎಲ್ನಲ್ಲಿ ಈ ಹಿಂದಿನ ಮುಖಾಮುಖಿಯಲ್ಲಿ ಬೆಂಗಳೂರು ವಿರುದ್ಧ ಮುಂಬೈ ಮೇಲುಗೈ ಸಾಧಿಸಿದ್ದರೂ, 2020ರ ಐಪಿಎಲ್ನಿಂದ ಈವರೆಗೂ ನಡೆದಿರುವ ಮುಂಬೈ ಇಂಡಿಯನ್ಸ್ ವಿರುದ್ಧದ 5 ಪಂದ್ಯಗಳಲ್ಲಿ ಆರ್ಸಿಬಿ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, ಚೊಚ್ಚಲ ಐಪಿಎಲ್ ಪ್ರಶಸ್ತಿ ಹುಡುಕಾಟದಲ್ಲಿರುವ ಆರ್ಸಿಬಿ ಇದೇ ಆತ್ಮವಿಶ್ವಾಸದೊಂದಿಗೆ ಮುಂಬೈ ಸವಾಲು ಎದುರಿಸುವ ಲೆಕ್ಕಾಚಾರದಲ್ಲಿದೆ.
ಮುಂಬೈ ವಿರುದ್ಧದ ಹಣಾಹಣಿಯೊಂದಿಗೆ 2023ರ ಐಪಿಎಲ್ ಜರ್ನಿ ಆರಂಭಿಸಲು ಅಣಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಮುಖ ಆಟಗಾರರ ಅನುಪಸ್ಥಿತಿಯೊಂದಿಗೆ ಮೈದಾನಕ್ಕಿಳಿಯಲಿದೆ. ಆರ್ಸಿಬಿ ತಂಡದ ರಜತ್ ಪಟಿದಾರ್, ಜೋಶ್ ಹೇಜಲ್ವುಡ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯ ಮೊದಲಾರ್ಧದವರೆಗೂ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದ್ದರೆ. ಮುಂಬೈ ವಿರುದ್ಧದ ಮೊದಲ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್ವೆಲ್ ಆಡುವುದು ಸಹ ಅನುಮಾನವಾಗಿದೆ. ಪ್ರಮುಖ ಆಟಗಾರರ ಅನುಪಸ್ಥಿತಿಯಲ್ಲಿ ನಾಯಕ ಫಾಫ್ ಡುಪ್ಲೆಸ್ಸಿ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರುಗಳ ಮೇಲೆ ಹೆಚ್ಚಿನ ಒತ್ತಡವಿದ್ದರೆ. ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಮೈಕಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್ ಅವರುಗಳ ಸಹ ಜವಾಬ್ದಾರಿಯುತ ಆಟವಾಡಬೇಕಾದ ಅನಿವಾರ್ಯತೆ ತಂಡಕ್ಕಿದೆ.
ಕಳೆದ ಸೀಸನ್ನಲ್ಲಿ ಕೊನೆಯ ಸ್ಥಾನದೊಂದಿಗೆ ಐಪಿಎಲ್ ಜರ್ನಿಯನ್ನ ಮುಗಿಸಿದ್ದ ಮುಂಬೈ ಇಂಡಿಯನ್ಸ್ ಈ ಬಾರಿ ಸ್ಟ್ರಾಂಗ್ ಕಮ್ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದೆ. ಪ್ರಮುಖವಾಗಿ ವೇಗಿ ಜಸ್ಪ್ರೀತ್ ಬುಮ್ರ, ಜೇಯ್ ರಿಚರ್ಡ್ಸನ್ ಅನುಪಸ್ಥಿತಿ ಮುಂಬೈ ತಂಡಕ್ಕೆ ದೊಡ್ಡ ಹಿನ್ನಡೆ ಮೂಡಿಸಿದ್ದರೆ. ಗಾಯದ ಸಮಸ್ಯೆ ಎದುರಿಸುತ್ತಿರುವ ಜೋಫ್ರಾ ಆರ್ಚರ್, ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಉಳಿದಂತೆ ಬ್ಯಾಟಿಂಗ್ನಲ್ಲಿ ರೋಹಿತ್ ಶರ್ಮ, ಸೂರ್ಯಕುಮಾರ್ ಯಾದವ್ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದರೆ. ಯುವ ಆಟಗಾರರಾದ ತಿಲಕ್ ವರ್ಮ, ಡೆವಿಡ್ ಬ್ರೇವ್ಸ್, ಟ್ರಿಸ್ಟನ್ ಸ್ಟಬ್ಸ್, ಟಿಮ್ ಡೇವಿಡ್ ಹಾಗೂ ಇಶಾನ್ ಕಿಶನ್ ಪ್ರದರ್ಶನದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.
IPL 2023, Royal Challengers Bangalore, Mumbai Indians, Virat Kohli, Rohit Sharma, Faf du Plessis, Sports Karnataka