ಟೀಮ್ ಇಂಡಿಯಾದಲ್ಲಿ ಖಾಯಂ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿರುವ ಇಶನ್ ಕಿಶನ್ ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಅತ್ತ ವಿಕೆಟ್ ಕೀಪಿಂಗ್ ಜೊತೆಗೆ ಬ್ಯಾಟಿಂಗ್ನಲ್ಲೂ ಅಬ್ಬರಿಸುತ್ತಿರುವ ಇಶನ್ ಕಿಶನ್ ಹೊಸ ದಾಖಲೆ ಬರೆದಿದ್ದಾರೆ.
ಲಕ್ನೋದಲ್ಲಿ ಶ್ರೀಲಂಕಾ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ಕಿಶನ್ ಕೇವಲ 56 ಎಸೆತಗಳಲ್ಲಿ 10 ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 89 ರನ್ ಚಚ್ಚಿದರು.
ಕಿಶನ್ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತದ ಹೊಸ ದಾಖಲೆ ಬರೆದರು. ಕ್ರಿಕೆಟ್ ದಿಗ್ಗಜ ಮಹೇಂದ್ರ ಸಿಂಗ್ ಧೋನಿ ಮತ್ತು ರಿಷಭ್ ಪಂತ್ ದಾಖಲೆಯನ್ನು ಉಡೀಸ್ ಮಾಡಿದರು.
56 ಎಸೆತಗಳಲ್ಲಿ 89 ರನ್ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಭಾರತ ಪರ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನ ಪಂದ್ಯವೊಂದರಲ್ಲಿ ಗರಿಷ್ಠ ರನ್ ಸಿಡಿಸಿದ ವಿಕೆಟ್ ಕೀಪರ್ ಎಂಬ ಸಾಧನೆ ಮಾಡಿದ್ದಾರೆ.
ವಿಕೆಟ್ ಕೀಪರ್ ಆಗಿ ಭಾರತ ಪರ ಟಿ20 ಕ್ರಿಕೆಟ್ನಲ್ಲಿ ಗರಿಷ್ಠ ರನ್ ಕಲೆಹಾಕಿದ ಆಟಗಾರ ರಿಷಭ್ ಪಂತ್ ಆಗಿದ್ದರು. ಇವರು 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 65 ರನ್ ಸಿಡಿಸಿದ್ದರು.
ಕೆಎಲ್ ರಾಹುಲ್ (57*) ಮತ್ತು ಎಂಎಸ್ ಧೋನಿ (56) ಇದ್ದರು. ರಾಹುಲ್ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಈ ಹಿಂದೆ ಶತಕ ಸಿಡಿಸಿದ್ದರಾದರೂ ಆಗ ವಿಕೆಟ್ ಕೀಪರ್ ಸ್ಥಾನ ಹೊಂದಿರಲಿಲ್ಲ. ಸದ್ಯ ಕಿಶನ್ ಈ ಎಲ್ಲ ದಾಖಲೆ ಪುಡಿ ಮಾಡಿ ನೂತನ ಸಾಧನೆ ಮಾಡಿದ್ದಾರೆ.