15ನೇ ಆವೃತ್ತಿಯ ಐಪಿಎಲ್ನಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನದಿಂದ ಅಬ್ಬರಿಸುತ್ತಿರುವ ದಿನೇಶ್ ಕಾರ್ತಿಕ್, ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ದೊಡ್ಡ ಗುರಿ ಹೊಂದಿದ್ದಾರೆ.
2022ರ ಐಪಿಎಲ್ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡುತ್ತಿರುವ ದಿನೇಶ್ ಕಾರ್ತಿಕ್, ಬ್ಯಾಟಿಂಗ್ನಲ್ಲಿ ಅತ್ಯದ್ಭುತ ಫಾರ್ಮ್ನಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಶಕ್ತಿಯಾಗಿರುವ ದಿನೇಶ್ ಕಾರ್ತಿಕ್, ಪ್ರಸಕ್ತ ಆವೃತ್ತಿಯಲ್ಲಿ ಎರಡು ಬಾರಿ ಆರ್ಸಿಬಿ ತಂಡದ ಗೆಲುವಿನ ಹೀರೋ ಆಗಿ ಮಿಂಚಿದ್ದಾರೆ. ಐಪಿಎಲ್ನಲ್ಲಿ ಕಮಾಲ್ ಮಾಡುತ್ತಿರುವ ದಿನೇಶ್ ಕಾರ್ತಿಕ್, ಇದೀಗ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ಗುರಿ ಹೊಂದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ನಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್, ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಕೆ, “ನನಗೆ ದೊಡ್ಡ ಗುರಿ ಇದ್ದು, ಇದಕ್ಕಾಗಿ ಸಾಕಷ್ಟು ಪರಿಶ್ರಮದಿಂದ ಕೆಲಸ ಮಾಡುತ್ತಿದ್ದೇನೆ. ದೇಶಕ್ಕಾಗಿ ವಿಶೇಷವಾದುದನ್ನು ಮಾಡಬೇಕೆಂಬುದು ನನ್ನ ಗುರಿಯಾಗಿದೆ. ಇದು ಆ ಪ್ರಯಾಣದ ಒಂದು ಭಾಗವಾಗಿದೆ. ಅಲ್ಲದೇ ಟೀಂ ಇಂಡಿಯಾದ ಭಾಗವಾಗಲು ನಾನು ಎಲ್ಲವನ್ನು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಇದು ಒಂದು ಹೆಜ್ಜೆಯಾಗಿದೆ” ಎನ್ನುವ ಮೂಲಕ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ಕುರಿತ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ.
2022ರ ಐಪಿಎಲ್ನಲ್ಲಿ
ಪ್ರಸಕ್ತ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಈ ಬಾರಿ ಆಡಿರುವ 6 ಪಂದ್ಯಗಳಲ್ಲಿ 197ರ ಸರಾಸರಿ ಹಾಗೂ 209.57ರ ಸ್ಟ್ರೈಕ್ ರೇಟ್ನಲ್ಲಿ 197 ರನ್ಗಳಿಸಿದ್ದಾರೆ. ಇದರಲ್ಲಿ ಒಂದು ಅರ್ಧಶತಕ ಸೇರಿದೆ. ಅಲ್ಲದೆ ಆಡಿರುವ 6 ಇನ್ನಿಂಗ್ಸ್ಗಳಲ್ಲಿ ದಿನೇಶ್ ಕಾರ್ತಿಕ್ 5 ಬಾರಿ ನಾಟೌಟ್ ಆಗಿರುವುದು ವಿಶೇಷ. ಆರ್ಸಿಬಿ ತಂಡದ ಫಿನಿಶರ್ ರೂಲ್ ನಿಭಾಯಿಸುತ್ತಿರುವ ದಿನೇಶ್, ಇದೇ ಮೊದಲ ಬಾರಿಗೆ ಒಂದೇ ಐಪಿಎಲ್ ಆವೃತ್ತಿಯಲ್ಲಿ ಎರಡು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
ಒಟ್ಟಾರೆ ಐಪಿಎಲ್ನಲ್ಲಿ
ಐಪಿಎಲ್ನಲ್ಲಿ ಈವರೆಗೂ 219 ಪಂದ್ಯಗಳನ್ನು ಆಡಿರುವ ದಿನೇಶ್ ಕಾರ್ತಿಕ್, 4243 ರನ್ಗಳಿಸಿದ್ದು, 26.85ರ ಸರಾಸರಿ ಹಾಗೂ 132.06ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಈವರೆಗೂ 20 ಅರ್ಧಶತಕಗಳನ್ನ ಗಳಿಸಿದ್ದಾರೆ.