ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ತಂಡದ ನಡುವೆ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಡ್ಜ್ಬಾಸ್ಟನ್ ಹೋರಾಟಕ್ಕೆ ಭಾರತ ತಂಡವನ್ನು ಜಸ್ಪ್ರಿತ್ ಬುಮ್ರಾ ಮುನ್ನಡೆಸಲಿದ್ದಾರೆ. ಟೆಸ್ಟ್ ಇತಿಹಾಸದಲ್ಲಿ 35 ವರ್ಷಗಳ ನಂತರ ಭಾರತ ತಂಡವನ್ನು ವೇಗದ ಬೌಲರ್ ಒಬ್ಬರು ಮುನ್ನಡೆಸಲಿದ್ದಾರೆ. ಇದು ಅಪರೂಪದ ದಾಖಲೆಯಾಗಿ ಇತಿಹಾಸದ ಪುಟ ಸೇರಲಿದೆ.
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಕ್ವಾರಂಟೈನ್ನಲ್ಲಿದ್ದಾರೆ. ಅಷ್ಟೇ ಅಲ್ಲ ಟೆಸ್ಟ್ ಪಂದ್ಯದ ವೇಳೆ ಚೇತರಿಸಿಕೊಳ್ಳುವುದು ಅಸಾಧ್ಯವಾಗಿದೆ. ಹೀಗಾಗಿ ಬಿಸಿಸಿಐ ಉಪನಾಯ ಜಸ್ಪ್ರಿತ್ ಬುಮ್ರಾ ಅವರಿಗೆ ನಾಯಕತ್ವದ ಪಟ್ಟ ಕೊಟ್ಟಿದೆ.
35 ವರ್ಷಗಳ ಬಳಿಕ ಟೀಮ್ ಇಂಡಿಯಾದ ನಾಯಕತ್ವ ವೇಗದ ಬೌಲರ್ ಕೈ ಸೇರಿದೆ. ಇದಕ್ಕೂ ಮುನ್ನ ಕಪಿಲ್ ದೇವ್ ಟೀಮ್ ಇಂಡಿಯಾವನ್ನು ಹಲವು ವರ್ಷಗಳ ಕಾಲ ಮುನ್ನಡೆಸಿದ್ದರು. ಈಗ ಬುಮ್ರಾ ಎಡ್ಜ್ಬಾಸ್ಟನ್ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಒಟ್ಟಿನಲ್ಲಿ ಟೀಮ್ ಇಂಡಿಯಾಕ್ಕೆ ಹೊಸ ಹೊಸ ನಾಯಕರು ಸಿಗುತ್ತಿದ್ದಾರೆ ಅನ್ನುವುದು ಸಂತಸದ ವಿಚಾರ.