ದೇಶೀ ಕ್ರಿಕೆಟ್ನ ವಿಶ್ವಕಪ್ ರಣಜಿ ಟ್ರೋಫಿಗೆ (Ranaji Trophy) ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ ಈ ಬಾರಿಯ ರಣಜಿ ಟೂರ್ನಿ ಆರಂಭವಾಗಲಿದೆ. ಈ ಬಾರಿ ರಣಜಿ ಟ್ರೋಫಿ 2 ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತ ಫೆಬ್ರವರಿ 10 ರಿಂದ ಮಾರ್ಚ್ 15 ರವರೆಗೆ ನಡೆದರೆ, ಎರಡನೇ ಹಂತವು ಮೇ 30 ರಿಂದ ಜೂನ್ 26 ರವರೆಗೆ ನಡೆಯಲಿದೆ. ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಮನೀಷ್ ಪಾಂಡೆ ತಂಡವನ್ನು ಮುನ್ನಡೆಸಲಿದ್ದಾರೆ. ರವಿಕುಮಾರ್ ಸಮರ್ಥ್ರನ್ನು ಉಪನಾಯಕನನ್ನಾಗಿ ಮಾಡಲಾಗಿದೆ.
ಕರ್ನಾಟಕ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ ಪಡಿಕ್ಕಲ್, ಶ್ರೇಯಸ್ ಗೋಪಾಲ್ ಮತ್ತು ಪ್ರಸಿದ್ಧ್ ಕೃಷ್ಣ ಕರ್ನಾಟಕ ತಂಡದಲ್ಲಿದ್ದಾರೆ.
ಕರ್ನಾಟಕ ತಂಡ ಎಲೈಟ್ ಸಿ ಗುಂಪಿನಲ್ಲಿಸ್ಥಾನ ಪಡೆದಿದೆ. ಕರ್ನಾಟಕ ಪುದುಚೇರಿ, ರೈಲ್ವೇ ಮತ್ತು ಜಮ್ಮು ಮತ್ತು ಕಾಶ್ಮೀರ ತಂಡಗಳ ವಿರುದ್ದ ಆಡಲಿದೆ. ತನ್ನ ಎಲ್ಲಾ ಪಂದ್ಯಗಳನ್ನು ಕರ್ನಾಟಕ ಚೆನ್ನೈನನಲ್ಲಿ ಆಡಲಿದೆ.
ಕರ್ನಾಟಕ ತಂಡ:
ಮನೀಶ್ ಪಾಂಡೆ (ನಾಯಕ), ರವಿ ಕುಮಾರ್ ಸಮರ್ಥ್ (ಉಪನಾಯಕ), ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ ಪಡಿಕ್ಕಲ್, ಸಿದ್ಧಾರ್ಥ್ ಕೆವಿ, ನಿಶ್ಚಲ್ ಡಿ, ಅನೀಶ್ವರ್ ಗೌತಮ್, ಶುಭಾಂಗ್ ಹೆಗ್ಡೆ, ಕೆ ಗೌತಮ್, ಶ್ರೇಯಸ್ ಗೋಪಾಲ್, ಜಗದೀಶ್ ಸುಚಿತ್ , ಕೆಸಿ ಕಾರ್ಯಪ್ಪ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಶರತ್ ಬಿಆರ್, ಪ್ರಸಿದ್ಧ್ ಕೃಷ್ಣ, ರೋನಿತ್ ಮೋರೆ, ವೆಂಕಟೇಶ್ ಎಂ, ವೈಶಾಕ್ ವಿ, ವಿದ್ಯಾಧರ್ ಪಾಟೀಲ್.