ಟೀಂ ಇಂಡಿಯಾ ಮುಂದಿನ ಕ್ಯಾಪ್ಟನ್ ಆತನೇ… ಕರೀಂ ವಾದ KL Rahul sportskarnataka
ಮೂರು ಮಾದರಿ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ಕೆ.ಎಲ್.ರಾಹುಲ್ ಬಗ್ಗೆ ಟೀ ಇಂಡಿಯಾದ ಮಾಜಿ ಆಟಗಾರ ಸಬಾ ಕರಂ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ.
ಟೆಸ್ಟ್ ತಂಡಕ್ಕೆ ಕೆ.ಎಲ್.ರಾಹುಲ್ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರಾಹುಲ್ ಅವರನ್ನ ತಂಡದ ಉಪನಾಯಕರನ್ನಾಗಿ ಮಾಡಿದ್ದು, ನೂರಕ್ಕೆ ನೂರು ಸರಿಯಾದ ನಿರ್ಧಾರ ಎಂದು ತಿಳಿಸಿದ್ದಾರೆ.
ಬಿಸಿಸಿಐ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದು, ರೋಹಿತ್ ಅನುಪಸ್ಥಿತಿಯಲ್ಲಿ ಉಪನಾಯಕನ ಸ್ಥಾನಕ್ಕೆ ರಾಹುಲ್ ಸೂಕ್ತ ವ್ಯಕ್ತಿ. ನಿಜ ಹೇಳಬೇಕಂದರೇ ಕೆ.ಎಲ್.ರಾಹುಲ್ ಭವಿಷ್ಯದಲ್ಲಿ ಟೀಂ ಇಂಡಿಯಾದ ಕ್ಯಾಪ್ಟನ್ ಆಗುವ ಅವಕಾಶಗಳು ಹೆಚ್ಚಿವೆ ಎಂದಿದ್ದಾರೆ.
ಇನ್ನು ರೋಹಿತ್ ಶರ್ಮಾ ಸೀಮಿತ ಓವರ್ ಗಳ ಪೂರ್ಣ ಪ್ರಮಾಣದ ನಾಯಕರಾದ ಬಳಿಕ ಕೆ.ಎಲ್.ರಾಹುಲ್ ಅವರನ್ನು ರೋಹಿತ್ ಗೆ ಡೆಪ್ಯೂಟಿ ಆಗಿ ನೇಮಕ ಮಾಡಲಾಗಿದೆ.
ಇದೀಗ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ರಾಹುಲ್ ಗೆ ಟೆಸ್ಟ್ ತಂಡದ ವೈಸ್ ಕ್ಯಾಪ್ಟನ್ ಪಟ್ಟ ಸಿಕ್ಕಿದೆ.