ಇತ್ತೀಚೆಗೆ ಐಪಿಎಲ್-2023ರ ಟೂರ್ನಿಗೆ ಸಿದ್ಧತೆ ಆರಂಭಿಸುವ ಮೂಲಕ ಗಮನ ಸೆಳೆದಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್. ಧೋನಿ ಇದೀಗ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರತಿಬಾರಿಯೂ ಒಂದಿಲ್ಲೊಂದು ಹೊಸ ವಿಷಯಗಳನ್ನ ಕಲಿಯುವ ಬಗ್ಗೆ ಆಸಕ್ತಿ ತೋರುವ ಎಂ.ಎಸ್. ಧೋನಿ, ಇದೀಗ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿ ತೋರಿದ್ದಾರೆ. ಜಮೀನಿನಲ್ಲಿ ಕ್ರ್ಯಾಕ್ಟರ್ ಮೂಲಕ ಕೆಲಸ ಮಾಡುವಲ್ಲಿ ಕ್ಯಾಪ್ಟನ್ ಕೂಲ್ ತೊಡಗಿದ್ದಾರೆ.
ತಮ್ಮ ಈ ಹೊಸ ಕಲಿಕೆ ಕುರಿತು ಮಹೇಂದ್ರ ಸಿಂಗ್ ಧೋನಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋ ಮತ್ತು ವಿಡಿಯೋ ಶೇರ್ ಮಾಡಿದ್ದಾರೆ. ವಿಶೇಷವೆಂದರೆ ಕ್ರಿಕೆಟ್ನಿಂದ ಹೊರಗುಳಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಧೋನಿ ಸಕ್ರಿಯವಾಗಿರಲಿಲ್ಲ. ಆದರೆ ಇದೀಗ ಎರಡು ವರ್ಷಗಳ ಬಳಿಕ ಕ್ಯಾಪ್ಟನ್ ಕೂಲ್, ಕೃಷಿಯಲ್ಲಿ ತೊಡಗಿಸಿಕೊಂಡಿರುವ ವಿಡಿಯೋವನ್ನ ತಮ್ಮ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿರುವ ಕ್ಯಾಪ್ಟನ್ ಕೂಲ್, ಐಪಿಎಲ್ ಟೂರ್ನಿಯಲ್ಲಿ ಮಾತ್ರ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಐಪಿಎಲ್ ಟೂರ್ನಿಗೆ ತಯಾರಿ ಸಹ ಆರಂಭಿಸಿರುವ ಧೋನಿ, ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರು.
Team India, Captain Cool, Ranchi, Farming, Mahendra Singh Dhoni, Sports Karnataka, IPL 2023 CSK