ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದೀಗ ಕ್ರಿಕೆಟ್ ಜಗತ್ತಿನ ಹೊರತಾಗಿ ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. ಧೋನಿ ತಮಿಳು ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಪದಾರ್ಪಣೆ ಮಾಡಲು ಸಿದ್ಧತೆ ಭರದಿಂದ ನಡೆಸಿದ್ದಾರೆ.
ಇದಕ್ಕಾಗಿ ಧೋನಿ ನಟ ರಜನಿಕಾಂತ್ ಅವರ ನಿಕಟವರ್ತಿಯಾಗಿರುವ ಸಂಜಯ್ ಅವರನ್ನು ನೇಮಿಸಿದ್ದಾರೆ. ಈ ಚಿತ್ರದಲ್ಲಿ ದಕ್ಷಿಣ ಭಾರತದ ನಟಿ ನಯನತಾರಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ತಮಿಳು ಇಂಡಸ್ಟ್ರಿ ಜೊತೆ ಧೋನಿಯ ಒಡನಾಟ
ಮಾಧ್ಯಮ ವರದಿಗಳ ಪ್ರಕಾರ, ಧೋನಿ ಪ್ರಸ್ತುತ ಐಪಿಎಲ್‌ನಲ್ಲಿ ನಿರತರಾಗಿದ್ದಾರೆ ಮತ್ತು ಈ ಋತುವಿನ ನಂತರ ಅವರು ಈ ಚಿತ್ರದ ಅಧಿಕೃತ ಘೋಷಣೆಯನ್ನು ಮಾಡಬಹುದು. ಇದೇ ತಿಂಗಳು ಚಿತ್ರದ ಶೂಟಿಂಗ್ ಕೂಡ ಶುರುವಾಗಲಿದೆ. ಧೋನಿ ಈಗಾಗಲೇ ತಮಿಳು ಚಿತ್ರರಂಗದೊಂದಿಗೆ ಒಡನಾಟ ಹೊಂದಿದ್ದಾರೆ. ತಮ್ಮ ಜೀವನಚರಿತ್ರೆ ‘ಎಂಎಸ್ ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ’ ಪ್ರಚಾರದಲ್ಲಿ ಧೋನಿ ಭಾಗಿಯಾಗಿದ್ದರು. ಇದು ಹಲವಾರು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಯಿತು. ಅವರ ಜೀವನಚರಿತ್ರೆ ದಕ್ಷಿಣ ಭಾರತದಲ್ಲಿ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ನಯನತಾರಾ ಪ್ರಸ್ತುತ ತನ್ನ ಮುಂಬರುವ ಬಾಲಿವುಡ್ ಚಿತ್ರದ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರೊಂದಿಗೆ ಅವರು ಕಾಣಿಸಿಕೊಳ್ಳಲಿದ್ದಾರೆ.