Neeraj Chopra ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪರ್ಧಿಸುವುದು ಡೌಟ್..!
ಮುಂಬರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಸೂಪರ್ ಸ್ಟಾರ್ ಅಥ್ಲೀಟ್ ನೀರಜ್ ಚೋಪ್ರಾ ಅವರು ಭಾಗವಹಿಸುವುದು ಅನುಮಾನವಾಗಿದೆ.
ತೊಡೆಸಂದು ಗಾಯದಿಂದ ಬಳಲುತ್ತಿರುವ ನೀರಜ್ ಚೋಪ್ರಾ ಅವರು ಮೊನ್ನೆ ಮೊನ್ನೆಯಷ್ಟೇ ಡೈಮಂಡ್ ಲೀಗ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.
ವಿಸ್ವ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ನೀರಜ್ ಚೋಪ್ರಾ ಅವರು ತೊಡೆ ಸಂದು ಗಾಯದಿಂದ ಬಳಲಿದ್ರು. ಅಲ್ಲದೆ ಕಾಮನ್ ವೆಲ್ತ್ ಗೇಮ್ಸ್ ನಿಂದಲೂ ಹೊರಗುಳಿದಿದ್ದರು. ಬಳಿಕ ಡೈಮಂಡ್ ಲೀಗ್ ನಲ್ಲಿ ಭಾಗವಹಿಸಿ ಚಿನ್ನದ ನಗೆ ಬಿರಿದ್ದರು. ಗುರುವದ ನಡೆದ ಡೈಮಂಡ್ ಲೀಗ್ ಫೈನಲ್ ನಲ್ಲಿ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ.
ಅಂದ ಹಾಗೇ ಸೆಪ್ಟಂಬರ್ 29ರಿಂದ ಅಕ್ಟೊಬರ್ 12ರವರೆಗೆ ರಾಷ್ಟ್ರೀಯ ಕ್ರೀಡಾಕೂಟ ಗುಜರಾತ್ ನಲ್ಲಿ ನಡೆಯಲಿದೆ.
ಏಳು ವರ್ಷಗಳ ನಂತರ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದೇಶದ ಅಗ್ರ ಅಥ್ಲೀಟ್ ಗಳು ಭಾಗವಹಿಸುವುದು ಕಡ್ಡಾಯವಾಗಿದೆ. ಆದ್ರೆ ನೀರಜ್ ಚೋಪ್ರಾ ಅವರು ತೊಡೆ ತಂದು ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಅನುಮಾನ. ಮುಂದಿನ ವರ್ಷ ಭಾಗವಹಿಸುವುದಾಗಿ ಹೇಳಿದ್ದಾರೆ.