ODI Cricket 2023 ಏಷ್ಯಾಕಪ್ ಟೂರ್ನಿ ಆಡಲು ಟೀಮ್ ಇಂಡಿಯಾ(Team India) ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬ ಬಿಸಿಸಿಐ(BCCI) ಕಾರ್ಯದರ್ಶಿ ಜಯ್ ಶಾ ಹೇಳಿಕೆ ಬೆನ್ನಲ್ಲೇ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್(ODI World Cup)ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ ಹಾಕಿದೆ.
ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್ ಟೂರ್ನಿ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಕ್ರಿಕೆಟ್ ಬೋರ್ಡ್(Pakistan Cricket Board) ಅಧ್ಯಕ್ಷ ರಮೀಜ್ ರಾಜಾ, ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್ನಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ(Asian Cricket Council) ಕಾರ್ಯಕಾರಿ ಮಂಡಳಿಯ ನಿರ್ಧಾರದ ಪ್ರಕಾರ ಮುಂದಿನ ವರ್ಷ ಏಷ್ಯಾಕಪ್ನ ಮುಂದಿನ ಆವೃತ್ತಿಯನ್ನು ಪಾಕಿಸ್ತಾನ ಆಯೋಜಿಸಲು ನಿರ್ಧರಿಸಲಾಗಿದೆ. ಆದರೆ ವಿಪರ್ಯಾಸ ಎಂಬಂತೆ ಜಯ್ ಶಾ ಅವರೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿದ್ದಾರೆ. ಅಲ್ಲದೇ ಮಂಗಳವಾರ ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂ ನಂತರ ನಡೆದ ಸಭೆಯಲ್ಲಿ ಜಯ್ ಶಾ ಅವರು ಭಾರತ ತಂಡ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು.
ಜಯ್ ಶಾ ಹೇಳಿಕೆ ಬೆನ್ನಲ್ಲೇ ಬಿಸಿಸಿಐ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ, 2023ರಲ್ಲಿ ಭಾರತದಲ್ಲಿ ನಡೆಯಲಿರುವ ODI ವಿಶ್ವಕಪ್ನಿಂದ ಹೊರಬರುವ ಲೆಕ್ಕಾಚಾರದಲ್ಲಿದೆ ಎಂದು ಪಿಸಿಬಿ ಮೂಲಗಳು ತಿಳಿಸಿವೆ. ಭಾರತ ಹಾಗೂ ಪಾಕಿಸ್ತಾನ ತಂಡಗಳು 2008ರ ಏಷ್ಯಾಕಪ್ ಬಳಿಕ ಈವರೆಗೂ ಉಭಯ ರಾಷ್ಟ್ರಗಳಲ್ಲಿ ಎರಡು ತಂಡಗಳು ಮುಖಾಮುಖಿಯಾಗಿಲ್ಲ. ಈ ಹಿಂದೆ ಪಾಕಿಸ್ತಾನ ಕೊನೆಯ ಬಾರಿಗೆ 2012ರಲ್ಲಿ ಭಾರತ ಪ್ರವಾಸ ಕೈಗೊಂಡಿತ್ತು.