ವಿಂಡೀಸ್ ವಿರುದ್ಧ ಪದಾರ್ಪಣೆ ಮಾಡಿದ Avesh Khan
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಏಕದಿನ ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಭಾರತ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡಿದೆ. ಈ ಪಂದ್ಯಕ್ಕೆ ಅವೇಶ್ ಖಾನ್ ಗೆ ಅವಕಾಶ ನೀಡಲಾಗಿದೆ. ಅವೇಶ್ ಏಕದಿನ ವೃತ್ತಿಜೀವನದ ಚೊಚ್ಚಲ ಪಂದ್ಯವನ್ನು ಆಡುತ್ತಿದ್ದಾರೆ. ಈ ಹಿಂದೆ ಅವರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಪದಾರ್ಪಣೆ ಮಾಡಿದ್ದರು. ಅವೇಶ್ ಅವರ ಇಲ್ಲಿಯವರೆಗಿನ ಪ್ರದರ್ಶನ ಉತ್ತಮವಾಗಿದೆ.

ಬಲಗೈ ವೇಗದ ಮಧ್ಯಮ ಬೌಲರ್ ಅವೇಶ್ ದೇಶೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಐಪಿಎಲ್‌ನಲ್ಲೂ ತಮ್ಮ ಕೈಚಳಕ ತೋರಿದ್ದಾರೆ. ಈ ಕಾರಣಕ್ಕಾಗಿ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಅವರು ಈ ವರ್ಷದ ಫೆಬ್ರವರಿ 20 ರಂದು ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಪರ ಮೊದಲ T-20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದೀಗ ಅವರು ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ವೃತ್ತಿ ಜೀವನದ ಮೊದಲ ಏಕದಿನ ಪಂದ್ಯವನ್ನೂ ಆಡುತ್ತಿದ್ದಾರೆ. ಅವೇಶ್ ಅನೇಕ ಸಂದರ್ಭಗಳಲ್ಲಿ ತಮ್ಮ ತಂಡಕ್ಕೆ ಉತ್ತಮ ಬೌಲಿಂಗ್ ಮಾಡಿದ್ದಾರೆ.

ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಅವೇಶ್ ಗೆ ಚೊಚ್ಚಲ ಕ್ಯಾಪ್ ನೀಡಿದರು. ಈ ವೇಳೆ ಕೋಚ್ ರಾಹುಲ್ ದ್ರಾವಿಡ್ ಜೊತೆಗೆ ತಂಡದ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಉಪಸ್ಥಿತರಿದ್ದರು. ಅವೇಶ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ನೋಡಿದರೆ, ಅವರು ಚೆನ್ನಾಗಿಯೇ ಪ್ರದರ್ಶಿಸಿದ್ದಾರೆ. ಇದುವರೆಗೆ 9 ಟಿ-20 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ಅವೇಶ್ ದೇಶೀಯ ಪಂದ್ಯಗಳಲ್ಲಿ ಪರಿಣಾಮಕಾರಿಯಾಗಿ ಪ್ರದರ್ಶನ ನೀಡಿದ್ದಾರೆ. ಪ್ರಥಮ ದರ್ಜೆ ಪಂದ್ಯಗಳ 47 ಇನ್ನಿಂಗ್ಸ್‌ಗಳಲ್ಲಿ 100 ವಿಕೆಟ್‌ಗಳನ್ನು ಪಡೆದಿದ್ದಾರೆ. ಆದರೆ ಲಿಸ್ಟ್ ಎ 22 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದಾರೆ. 38 ಐಪಿಎಲ್ ಪಂದ್ಯಗಳಲ್ಲಿ 47 ವಿಕೆಟ್ ಪಡೆದಿದ್ದಾರೆ.
ODI series Avesh Khan made his debut against Windies