ಅತಿಥೇಯ ಪಾಕಿಸ್ತಾನ(Pakistan) ಹಾಗೂ ಪ್ರವಾಸಿ ಇಂಗ್ಲೆಂಡ್(England) ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆ(ಡಿಸೆಂಬರ್ 1) ಆರಂಭವಾಗಲಿದ್ದು, ಉಭಯ ತಂಡಗಳು ರಾವಲ್ಪಿಂಡಿ(Rawalpindi) ಅಂಗಳದಲ್ಲಿ ಮುಖಾಮುಖಿಯಾಗಲಿವೆ.
2005ರ ಬಳಿಕ ಮೊದಲ ಬಾರಿಗೆ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದು, ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಇಂಗ್ಲೆಂಡ್ ಆಟಗಾರರು ಪಾಕಿಸ್ತಾನ ತಂಡದ ಸವಾಲು ಎದುರಿಸಲಿದ್ದಾರೆ. ಟೆಸ್ಟ್ ಸರಣಿಗಾಗಿ ಎರಡು ತಂಡಗಳು ತಮ್ಮದೇ ರಣತಂತ್ರ ರೂಪಿಸಿದ್ದು, ಬಲಿಷ್ಠ ತಂಡವನ್ನ ಕಣಕ್ಕಿಳಿಸಲು ಸಜ್ಜಾಗಿವೆ. ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯಕ್ಕೆ ಈಗಾಗಲೇ ಪ್ಲೇಯಿಂಗ್ ಇಲವೆನ್ ಪ್ರಕಟಿಸಿದೆ.
ರಾವಲ್ಪಿಂಡಿಯಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಆಲ್ರೌಂಡರ್ ಲಿಯಮ್ ಲಿವಿಂಗ್ಸ್ಟೋನ್ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡುತ್ತಿದ್ದರೆ. ಇಂಗ್ಲೆಂಡ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಬೆನ್ ಡಕ್ಕೆಟ್, 6 ವರ್ಷದ ಬಳಿಕ ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ತಂಡದ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಇನ್ನೂ ಕೋಚ್ ಬ್ರೆಂಡನ್ ಮೆಕ್ಕಲಂ ಅವರ ಕೋಚಿಂಗ್ನಲ್ಲಿ ಇಂಗ್ಲೆಂಡ್ ತಂಡದ ತನ್ನ ಮೊದಲ ವಿದೇಶಿ ಟೆಸ್ಟ್ ಸರಣಿ ಆಡುತ್ತಿದೆ. ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಕ್ರಿಕೆಟ್ನಲ್ಲಿ ಹಲವು ಬಾರಿ ಮುಖಾಮುಖಿಯಾಗಿವೆ. ಇನ್ನೂ ಪಾಕಿಸ್ತಾನದಲ್ಲಿ ಎರಡು ತಂಡಗಳು 24 ಪಂದ್ಯಗಳನ್ನಾಡಿದ್ದು, ಇದರಲ್ಲಿ ಪಾಕಿಸ್ತಾನ 4 ಬಾರಿ ಗೆಲುವು ಸಾಧಿಸಿದ್ದರೆ, ಇಂಗ್ಲೆಂಡ್ 2 ಬಾರಿ ಗೆಲುವು ಸಾಧಿಸಿದೆ. ಇನ್ನೂ 18 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿದೆ.
ಇಂಗ್ಲೆಂಡ್ ಪ್ಲೇಯಿಂಗ್ ಇಲವೆನ್:
ಝಾಕ್ ಕ್ರಾಲಿ, ಬೆನ್ ಡಕ್ಕೆಟ್, ಒಲಿ ಪೋಪ್, ಜೋ ರೂಟ್, ಹ್ರಾರಿ ಬ್ರೂಕ್, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್, ಲಿಯಮ್ ಲಿವಿಂಗ್ಸ್ಟೋನ್, ಒಲಿ ರಾಬಿನ್ಸನ್, ಜ್ಯಾಕ್ ಲೀಚ್, ಜೇಮ್ ಆಂಡರ್ಸನ್.