ಬ್ಯಾಟ್ಸಮನ್ಗಳ ಭರ್ಜರಿ ಪ್ರದರ್ಶನದ ನೆರವಿನಿಂದ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವಿನ ಐತಿಹಾಸಿಕ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು.
ರಾವಲ್ಪಿಂಡಿಯಲ್ಲಿ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಎರಡು ತಂಡದ ಬ್ಯಾಟ್ಸಮನ್ಗಳು ಅದ್ಭುತ ಪ್ರದರ್ಶನ ನೀಡಿದರು. ಪಂದ್ಯದ ಐದನೇ ಹಾಗೂ ಕೊನೆಯ ದಿನದಾಟದಲ್ಲಿ ಪಾಕಿಸ್ತಾನ್ ಬೌಲರ್ಗಳು ಉತ್ತಮ ದಾಳಿ ನಡೆಸಿದರು. ಪರಿಣಾಮ ಆಸ್ಟ್ರೇಲಿಯಾ ತಂಡವನ್ನ, ಮೊದಲ ಇನ್ನಿಂಗ್ಸ್ನಲ್ಲಿ 459 ರನ್ಗಳಿಗೆ ಕಟ್ಟಿಹಾಕಿದ ಪಾಕಿಸ್ತಾನ, 17 ರನ್ಗಳ ಅಲ್ಪ ಮುನ್ನಡೆ ಪಡೆಯಿತು. ಆಸೀಸ್ ಪರ ಬ್ಯಾಟ್ಸಮನ್ಗಳು ಸಾಂಘಿಕ ಪ್ರದರ್ಶನ ನೀಡಿದರು.
ಮೊದಲ ಇನ್ನಿಂಗ್ಸ್ನಲ್ಲಿ ಲಭಿಸಿದ 17 ರನ್ಗಳ ಅಲ್ಪ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ ಪಾಕಿಸ್ತಾನ ಮತ್ತೊಮ್ಮೆ ಬ್ಯಾಟಿಂಗ್ನಲ್ಲಿ ಮಿಂಚಿತು. ಆರಂಭಿಕರಾಗಿ ಕಣಕ್ಕಿಳಿದ ಅಬ್ದುಲ್ಲಾ ಶಫೀಕ್(136*) ಹಾಗೂ ಇಮಾಮ್-ಉಲ್-ಹಕ್(111*) ಶತಕ ಸಿಡಿಸಿ ಅಬ್ಬರಿಸಿದರು. ಕಾಂಗರೂ ಪಡೆಯ ಬೌಲರ್ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಈ ಜೋಡಿ, ಮೊದಲ ವಿಕೆಟ್ಗೆ 252 ರನ್ಗಳ ಅತ್ಯುತ್ತಮ ಜೊತೆಯಾಟವಾಡಿದರು. ಈ ಜೊತೆಯಾಟ ಬೇರ್ಪಡಿಸಲು ಆಸ್ಟ್ರೇಲಿಯಾ 9 ಮಂದಿ ಬೌಲರ್ಗಳನ್ನು ಬಳಿಸಿದರು ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಮೊದಲ ಟೆಸ್ಟ್, ಡ್ರಾನಲ್ಲಿ ಅಂತ್ಯ ಕಂಡಿತು.
ಮೊದಲ ಇನ್ನಿಂಗ್ಸ್ನಲ್ಲಿ ಅತ್ಯುದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಪಾಕಿಸ್ತಾನ 4 ವಿಕೆಟ್ ನಷ್ಟಕ್ಕೆ 476 ರನ್ಗಳ ಬೃಹತ್ ಮೊತ್ತ ಕಲೆ ಹಾಕಿತು. ಪಾಕಿಸ್ತಾನದ ಪರ ಇಮಾನ್-ಉಲ್-ಹಕ್(157) ಹಾಗೂ ಅಜ಼ರ್ ಅಲಿ(185) ಬ್ಯಾಟಿಂಗ್ನಲ್ಲಿ ಮಿಂಚಿದರು. ಆತಿಥೇಯ ಪಾಕ್ ತಂಡಕ್ಕೆ ದಿಟ್ಟ ಪ್ರತ್ಯುತ್ತರ ನೀಡಿದ ಆಸ್ಟ್ರೇಲಿಯಾ, ಮೊದಲ ಇನ್ನಿಂಗ್ಸ್ನಲ್ಲಿ 459 ರನ್ಗಳಿಸಿತು. ಉಸ್ಮಾನ್ ಖವಾಜ(97), ಮಾರ್ನಸ್ ಲಬುಸ್ಚೆಗ್ನೆ(90), ಸ್ಟೀವ್ ಸ್ಮಿತ್(78), ವಾರ್ನರ್(68) ಸಾಂಘಿಕ ಬ್ಯಾಟಿಂಗ್ ಪ್ರದರ್ಶಿಸಿದರು. ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಮಾರ್ಚ್ 12ರಿಂದ ಕರಾಚಿಯಲ್ಲಿ ನಡೆಯಲಿದೆ.