PM Narendra Modi – ಭಾರತೀಯ ಕ್ರೀಡಾಪಟುಗಳ ಜೊತೆ ಪ್ರಧಾನಿ ಸಂವಾದ

ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳು ಮತ್ತು ಕೋಚ್, ಸಿಬ್ಬಂದಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ.
ಜುಲೈ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಸಂವಾದದಲ್ಲಿ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ಬಾರಿಯೂ ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸುತ್ತಲೇ ಬಂದಿದ್ದಾರೆ. ಈ ಹಿಂದೆ ಕಾಮನ್ ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್, ಕಳೆದ ವರ್ಷ ನಡೆದಿದ್ದ ಟೋಕಿಯೋ ಒಲಿಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುತ್ತಲೇ ಬಂದಿದ್ದಾರೆ. ಅಲ್ಲದೆ ಕ್ರೀಡಾ ಕೂಟದ ಮುಗಿದ ಮೇಲೆ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸುವ ಪರಿಪಾಠವನ್ನು ಬೆಳೆಸಿಕೊಂಡಿದ್ದಾರೆ.
ಜುಲೈ 28ರಿಂದ ಆಗಸ್ಟ್ 8ರವರೆಗೆ ಕಾಮನ್ ವೆಲ್ತ್ ಕ್ರೀಡಾ ಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಭಾರತದ 215 ಕ್ರೀಡಾಪಟುಗಳು 19ಸ್ಪರ್ಧೆಗಳ 141 ವಿಭಾಗದಲ್ಲಿ ಭಾಗವಹಿಸಲಿದ್ದಾರೆ. . ಒಟ್ಟು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 22 ಸ್ಪರ್ಧೆಗಳು ನಡೆಯಲಿವೆ. ಭಾರತ ತಂಡದಲ್ಲಿ ಒಟ್ಟು 215 ಸ್ಪರ್ಧಿಗಳಿದ್ದಾರೆ. ಇದರಲ್ಲಿ 108 ಪುರುಷ ಕ್ರೀಡಾಪಟುಗಳು ಮತ್ತು 107 ಮಹಿಳಾ ಅಥ್ಲೇಟ್ ಗಳಿದ್ದಾರೆ.