ಐಪಿಎಲ್ 15ರ 64ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ ನಡೆಸಲಿವೆ. ಪಂಜಾಬ್ ನಾಯಕ ಮಯಾಂಕ್ ಅಗರ್ವಾಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಡೆಲ್ಲಿ ತಂಡ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆ ಮಾಡಿದೆ. ಚೇತನ್ ಸಕಾರಿಯಾ ಬದಲಿಗೆ ಖಲೀಲ್ ಅಹ್ಮದ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಕೆಎಸ್ ಭರತ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಗೆ ಅವಕಾಶ ಸಿಕ್ಕಿದೆ.
ಉಭಯ ತಂಡಗಳು 12 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ರೇಸ್ನಲ್ಲಿ ಉಳಿದಿವೆ. DC ಯ ನಿವ್ವಳ ರನ್ ರೇಟ್ +0.210 ಆಗಿದ್ದರೆ, PBKS ನದ್ದು +0.023 ಆಗಿದೆ. ಇಂದಿನ ಪಂದ್ಯದಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸುವ ತಂಡಕ್ಕೆ ಪ್ಲೇ ಆಫ್ಗೆ ಲಗ್ಗೆ ಇಡಲು ಉತ್ತಮ ಅವಕಾಶವಿದೆ.
ಪಂಜಾಬ್ – ಜಾನಿ ಬೈರ್ಸ್ಟೋ, ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್ಸ್ಟೋನ್, ಮಯಾಂಕ್ ಅಗರ್ ವಾಲ್ (ನಾಯಕ), ಜಿತೇಶ್ ಶರ್ಮಾ, ಹರ್ಪ್ರೀತ್ ಬ್ರಾರ್, ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್ದೀಪ್ ಸಿಂಗ್
ದೆಹಲಿ – ಡೇವಿಡ್ ವಾರ್ನರ್, ಸರ್ಫರಾಜ್ ಖಾನ್, ಮಿಚೆಲ್ ಮಾರ್ಷ್, ರಿಷಭ್ ಪಂತ್, ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋರ್ತ್ಯ, ಖಲೀಲ್ ಅಹ್ಮದ್