ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ಬಿಸಿಸಿಐ ರಾಹುಲ್ ದ್ರಾವಿಡ್ ಅವರನ್ನು ಅಧಿಕೃತವಾಗಿ ನೇಮಿಸಿದೆ. ದ್ರಾವಿಡ್ ಕೋಚ್ ಆಗುತ್ತಿದ್ದಂತೆ ಕ್ರಿಕೆಟ್ ವಲಯದಲ್ಲಿ ಹೊಸ ಆಶಯಗಳು ಹುಟ್ಟಿಕೊಂಡಿವೆ
ಟಿ20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಕೋಚ್ ರವಿ ಶಾಸ್ತ್ರಿ ಅವರ ಕಾರ್ಯಾವಧಿ ಪೂರ್ಣಗೊಳ್ಳಲಿದೆ. ಹೀಗಾಗಿ ಹೊಸ ಕೋಚ್ ಹುದ್ದೆಗಾಗಿ ಇತ್ತೀಚೆಗಷ್ಟೇ ಬಿಸಿಸಿಐ ಅರ್ಜಿ ಆಹ್ವಾನಿಸಿತ್ತು. ಇದೀಗ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.