ಜಾಸ್ ಬಟ್ಲರ್(70*) ಜವಾಬ್ದಾರಿಯುತ ಬ್ಯಾಟಿಂಗ್ ನಡುವೆಯೂ ಬಲಿಷ್ಠ ಕಮ್ಬ್ಯಾಕ್ ಮಾಡಿದ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 169 ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 3 ವಿಕೆಟ್ಗೆ 169 ರನ್ ಕಲೆಹಾಕಿದೆ. ರಾಜಸ್ಥಾನ್ ಪರ ಜಾಸ್ ಬಟ್ಲರ್ 70* ರನ್ (47 ಬಾಲ್, 6 ಸಿಕ್ಸ್), ಹೆಟ್ಮಾಯರ್ 42* ರನ್ (31 ಬಾಲ್, 4 ಬೌಂಡರಿ, 2 ಸಿಕ್ಸ್) ಹಾಗೂ ದೇವದತ್ ಪಡಿಕ್ಕಲ್ 37 ರನ್ (29 ಬಾಲ್, 2 ಬೌಂಡರಿ, 2 ಸಿಕ್ಸ್), ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.
ಮೊದಲು ಬ್ಯಾಟಿಂಗ್ ಆರಂಭಿಸಿದ ರಾಜಸ್ಥಾನ್, ಆರಂಭಿಕ ಆಘಾತ ಕಂಡಿತು. ತಂಡದ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್(4) ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೆ, ನಾಯಕ ಸಂಜೂ ಸ್ಯಾಮ್ಸನ್(8) ಬಹುಬೇಗನೆ ನಿರ್ಗಮಿಸಿದರು. ಆದರೆ 2ನೇ ವಿಕೆಟ್ಗೆ ಜೊತೆಯಾದ ಬಟ್ಲರ್ ಹಾಗೂ ಪಡಿಕ್ಕಲ್ ಉಪಯುಕ್ತ 70 ರನ್ಗಳ ಜೊತೆಯಾಟವಾಡಿ ತಂಡಕ್ಕೆ ನೆರವಾದರು. ಪಡಿಕ್ಕಲ್ ಔಟಾದ ನಂತರ ಬಂದ ಶಿಮ್ರಾನ್ ಹೆಟ್ಮಾಯರ್ 42* ರನ್ (31 ಬಾಲ್, 4 ಬೌಂಡರಿ, 2 ಸಿಕ್ಸ್) ಸಹ ಉತ್ತಮ ಆಟವಾಡಿದರು. ಒಂದು ಹಂತದಲ್ಲಿ ಉತ್ತಮವಾಗಿ ರನ್ ಕಲೆಹಾಕುತ್ತಿದ್ದ ರಾಜಸ್ಥಾನ್ ರಾಯಲ್ಸ್, ನಂತರ ನಿಧಾನಗತಿಯ ಆಟಕ್ಕೆ ಮೊರೆ ಹೋಯಿತು. 4ನೇ ವಿಕೆಟ್ಗೆ ಜೊತೆಯಾದ ಇವರಿಬ್ಬರು, ಅಜೇಯ 83 ರನ್ಗಳಿಸುವ ಮೂಲಕ ತಂಡದ ಮೊತ್ತವನ್ನ ಹೆಚ್ಚಿಸಿದರು. ಆರ್ಸಿಬಿ ಪರ ಡೇವಿಡ್ ವಿಲ್ಲಿ, ವನಿಂದು ಹಸರಂಗ ಹಾಗೂ ಹರ್ಷಲ್ ಪಟೇಲ್ ತಲಾ 1 ವಿಕೆಟ್ ಪಡೆದರು.