Rohit Sharma – ವಿಂಡೀಸ್ ಸರಣಿಗೆ ಮುನ್ನ ರಿಲ್ಯಾಕ್ಸ್ ಮೂಡ್ ನಲ್ಲಿ ರೋಹಿತ್ ಶರ್ಮಾ
ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ಈಗ ಫಿಟ್ ಆಗಿದ್ದಾರೆ. ಅಲ್ಲದೆ ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಮತ್ತು ಟಿ-20 ಸರಣಿಯನ್ನು ಎದುರು ನೋಡುತ್ತಿದ್ದಾರೆ.
ಈ ನಡುವೆ ರೋಹಿತ್ ಶರ್ಮಾ ಮುಂಬೈನಲ್ಲಿ ಕುಟುಂಬದ ಜೊತೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ರಿಲ್ಯಾಕ್ಸ್ ಮೂಡ್ ನಲ್ಲಿರುವ ರೋಹಿತ್ ಶರ್ಮಾ ಅವರು ತನ್ನ ಪತ್ನಿ ರಿತಿಕಾ ಸಜ್‍ದೇಹ್ ಜೊತೆ ಇಳಿ ಸಂಜೆಯ ವೇಳೆಯಲ್ಲಿ ತೆಗೆದ ಫೋಟೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Rohit Sharma and Ritika Sajdeh chill at home
ಸದ್ಯ ರೋಹಿತ್ ಶರ್ಮಾ ಅವರು ಟೀಮ್ ಇಂಡಿಯಾದ ಏಕದಿನ ಮತ್ತು ಟಿ-20 ತಂಡದ ನಾಯಕನಾಗಿದ್ದಾರೆ. ಹಾಗೇ ಮುಂದಿನ ದಿನಗಳಲ್ಲಿ ಟೆಸ್ಟ್ ತಂಡವನ್ನು ಮುನ್ನಡೆಸುವ ಎಲ್ಲಾ ಸಾಧ್ಯತೆಗಳು ಇವೆ.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿ ಫೆಬ್ರವರಿ 6 ರಿಂದ ಆರಂಭವಾಗಲಿದೆ. ಫೆಬ್ರವರಿ 6, 9 ಮತ್ತು 12ರಂದು ಅಹಮದಾಬಾದ್ ನಲ್ಲಿ ಏಕದಿನ ಪಂದ್ಯ ಹಾಗೂ ಕೊಲ್ಕತ್ತಾದಲ್ಲಿ ಫೆಬ್ರವರಿ 16, 18 ಮತ್ತು 20ರಂದು ಟಿ-20 ಪಂದ್ಯಗಳು ನಡೆಯಲಿವೆ.
ಈ ಹಿಂದೆ ರೋಹಿತ್ ಶರ್ಮಾ ಅವರು ಗಾಯದಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದರು. ಆಗ ಏಕದಿನ ತಂಡವನ್ನು ಕೆ.ಎಲ್. ರಾಹುಲ್ ಮುನ್ನಡೆಸಿದ್ದರು. ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಮತ್ತು ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಮುಖಭಂಗ ಅನುಭವಿಸಿತ್ತು. ಟೆಸ್ಟ್ ಸರಣಿಯ ಸೋಲಿನ ನಂತರ ವಿರಾಟ್ ಕೊಹ್ಲಿ ನಾಯಕತ್ವವನ್ನು ತ್ಯಜಿಸಿದ್ದರು.
ಇದೀಗ ಮೂರು ಮಾದರಿಯ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ನಾಯಕರನಾಗುವ ಎಲ್ಲಾ ಸಾಧ್ಯತೆಗಳಿವೆ.