ಆಸ್ಟೇಲಿಯಾದಲ್ಲಿ ಆರಂಭವಾಗಲಿರುವ T20I ವಿಶ್ವಕಪ್(World Cup) ಟೂರ್ನಿಗೆ ಕೌಂಟ್ಡೌನ್ ಶುರುವಾಗಿದ್ದು, ಟಿ20 ವಿಶ್ವಕಪ್ ಟೂರ್ನಿಗಾಗಿ ಟೀಂ ಇಂಡಿಯಾ(Team India) ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಕಾಂಗರೂ ನಾಡಿನಲ್ಲಿ ನಡೆಯುವ ಚುಟುಕು ಕ್ರಿಕೆಟ್ ಸಮರಕ್ಕೆ ಭಾರತದ ಆಟಗಾರರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದಾರೆ.
ಈ ನಡುವೆ ನಾಯಕನಾಗಿ ಚೊಚ್ಚಲ ವಿಶ್ವಕಪ್ನಲ್ಲಿ ಭಾರತವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮ(Rohit Sharma) ಸಹ ವಿಶ್ವಕಪ್ ಟೂರ್ನಿಯನ್ನ ಎದುರು ನೋಡುತ್ತಿದ್ದಾರೆ. ಇದರ ಜೊತೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ, ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ(Virat Kohli) ದಾಖಲೆ ಮುರಿಯುವ ನಿರೀಕ್ಷೆ ಹೊಂದಿದ್ದಾರೆ. ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಸಹ, ಹಿಟ್ ಮ್ಯಾನ್ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ.
ಭಾರತದ ಯಶಸ್ವಿ ಕ್ಯಾಪ್ಟನ್ಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಕಿಂಗ್ ಕೊಹ್ಲಿ, 2017ರಿಂದ 2021ರವರೆಗೆ 50 T20I ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನ ಮುನ್ನಡೆಸಿದ್ದಾರೆ. ವಿರಾಟ್ ಕೊಹ್ಲಿ ದಾಖಲೆಯನ್ನ ಹಿಂದಿಕ್ಕಲು ರೋಹಿತ್ ಶರ್ಮಾಗೆ 5 ಪಂದ್ಯಗಳ ಅಗತ್ಯವಿದೆ. ಹೀಗಾಗಿ 2022ರ ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ಈ ದಾಖಲೆಯನ್ನು ಬ್ರೇಕ್ ಮಾಡುವ ನಿರೀಕ್ಷೆಯೊಂದಿಗೆ ರೋಹಿತ್ ಶರ್ಮ, ಟಿ20 ವಿಶ್ವಕಪ್ ಟೂರ್ನಿಯನ್ನ ಎದುರು ನೋಡುತ್ತಿದ್ದಾರೆ.
T20I ವಿಶ್ವಕಪ್ ಟೂರ್ನಿಯ ಗುಂಪು ಹಂತದಲ್ಲಿ ರೋಹಿತ್ ಶರ್ಮ ಈ ಮೈಲಿಗಲ್ಲು ತಲುಪುವ ಅವಕಾಶವಿದೆ. ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನ ಮುನ್ನಡೆಸಿದ 50 ಪಂದ್ಯಗಳಲ್ಲಿ 30 ಪಂದ್ಯಗಳಲ್ಲಿ ಗೆಲುವು ಕಂಡಿದ್ದು, 16 ಸೋಲು ಹಾಗೂ 2 ಪಂದ್ಯ ಟೈ ಫಲಿತಾಂಶ ಬಂದಿದೆ. ಪ್ರಸ್ತುತ ರೋಹಿತ್ ಶರ್ಮ 35 ಪಂದ್ಯಗಳಲ್ಲಿ ಗೆಲುವಿನ ನಗೆಬೀರಿದ್ದು, 10 ಪಂದ್ಯಗಳಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.