ಐರ್ಲೆಂಡ್ ವಿರುದ್ಧ ಟಿ-20 ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸಿದ ನಂತರ ಭಾರತ ಉತ್ಸಾಹದಲ್ಲಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ತಯಾರಿ ನಡೆಸಿದೆ.
ವಿಶ್ವಕಪ್ ಟಿ-20ಗೂ ಕೆಲವೇ ಕೆಲವು ಚುಟುಕು ಪಂದ್ಯಗಳು ಉಳಿದಿವೆ. ಸದ್ಯ ಆಯ್ಕೆ ಸಮಿತಿ ಸದಸ್ಯರು ಆಟಗಾರರ ಆಟದ ಮೇಲೆ ಕಣ್ಣು ನೆಟ್ಟಿದ್ದಾರೆ. ಒಂದು ಮೂಲದ ಪ್ರಕಾರ ಮೊಹಮ್ಮದ್ ಶಮಿ ಆಯ್ಕೆದಾರರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ.

“ಶಮಿ ಅವರು ಚುಟುಕು ಸ್ವರೂಪಕ್ಕೆ ಹೊಂದಿಕೊಳ್ಳುವ ಆಟಗಾರನಲ್ಲ. ಟಿ-20 ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಆಯ್ಕೆದಾರರ ಯುವ ಆಟಗಾರರಿಗೆ ಹೆಚ್ಚು ಅವಕಾಶ ನೀಡಲಾಗುವುದು. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ನಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಅನುಭವಿ ಬೌಲರ್ ಎಂದು ಪರಿಗಣಿಸಲಾಗಿದೆ. ಬಹುಶಃ ಶಮಿ ಆಸ್ಟ್ರೇಲಿಯಾ ಫ್ಲೈಟ್ ಮಿಸ್ ಮಾಡಿಕೊಳ್ಳಬಹುದು.

ಕಳೆದ ಬಾರಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಕೋವಿಡ್-19 ಕಾರಣದಿಂದ ಮುಂದೂಡಲ್ಪಟ್ಟಿತ್ತು. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶಮಿ ತಂಡದಲ್ಲಿದ್ದಾರೆ.