sexual assault ಲಂಕಾ ಕ್ರಿಕೆಟಿಗ ಧನುಷ್ಕಾ ಗುಣತಿಲಕಾಗೆ ಸಿಡ್ನಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಲಂಕಾ ಕ್ರಿಕೆಟಿಗ ಜೈಲಿನಲ್ಲೆ ಕಾಲ ಕಳೆಯಬೇಕಿದೆ.
ನ.2ರಂದು 29 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಂಬಂಧ ಧನುಷ್ಕಾ ಗುಣತಿಲಕ ಅವರನ್ನು ಸಿಡ್ನಿ ಪೊಲೀಸರು ಬಂಧಿಸಿದ್ದರು.
ಸೆಂಟ್ರಲ್ ಸ್ಥಳೀಯ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ರಾಬರ್ಟ್, ಗುಣತಿಲಕ ಅವರಿಗೆ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂದು ಹೇಳಿದರು. ಆದರೆ ನ್ಯಾಯಾಲಯ ಅದರೆ ನ್ಯಾಯಾಲಯ ಜಾಮೀನು ಕೊಡಲು ನಿರಾಕರಿಸಿತು.
ಗುಣತಿಲಕ ಪರ ವಕೀಲ ಆನಂದ್ ಅಮರ್ ನಾಥ್, ಕೋರ್ಟ್ನ ಆದೇಶ ನಿರಾಸೆ ತಂದಿದೆ. ನ್ಯೂ ಸೌತ್ ವೇಲ್ ಸುಪ್ರೀಮ್ ಕೋರ್ಟ್ ಮೊರೆ ಹೋಗಲಾಗುವುದೆಂದು ತಿಳಿಸಿದ್ದಾರೆ.
ಇದೇ ವೇಳೆ ಗುಣತಿಲಕ ಅವರ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲಂಕಾ ಕ್ರಿಕೆಟ್ ಮಂಡಳಿ ಅವರನ್ನು ಅಮಾನತು ಮಾಡಿದೆ. ಈ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ಹೊಂದಿದ್ದೇವೆ. ತನಿಖೆಗೆ ಸಂಪೂರ್ಣ ಸಹಕರಿಸುವುದಾಗಿ ಹೇಳಿದೆ.