Shaheen Shah Afridi ಪಾಕಿಸ್ತಾನದ ವೇಗದ ಬೌಲರ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು(Milestone) ತಲುಪಿದ್ದು, T20I ಕ್ರಿಕೆಟ್‌ನಲ್ಲಿ 50 ವಿಕೆಟ್ ಪಡೆದ ಯುವ ವೇಗದ ಬೌಲರ್(Youngest Fast Bowler) ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಸೂಪರ್-12 ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಶಾಹೀನ್ ಅಫ್ರಿದಿ, 22 ವರ್ಷ 211ನೇ ದಿನದಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ. ಆಸ್ಟ್ರೇಲಿಯಾ ಮಹಿಳಾ ತಂಡದ ಆಲ್ರೌಂಡರ್ ಎಲ್ಲಿಸ್ ಪೆರ್ರಿ 23 ವರ್ಷ 144 ದಿನದಲ್ಲಿ 50 ವಿಕೆಟ್ ಸಾಧೆನೆ ಮಾಡಿದ್ದರು. ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್ 19 ವರ್ಷ 256 ದಿನದಲ್ಲಿ ಈ ಮೈಲಿಗಲ್ಲು ತಲುಪಿದರು.
ಪಾಕ್ ತಂಡದ ವೇಗದ ಬೌಲರ್ ಶಾಹೀನ್ ಅಫ್ರಿದಿ, ಪ್ರಸಕ್ತ T20 ವಿಶ್ವಕಪ್ ಟೂರ್ನಿಯ ಸೂಪರ್-12 ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಈ ಹಿಂದೆ ನಡೆದ ಭಾರತ ಹಾಗೂ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಪಡೆಯುವಲ್ಲಿ ಅಫ್ರಿದಿ ವಿಫಲರಾಗಿದ್ದರು. ನೆದರ್ಲೆಂಡ್ಸ್ ವಿರುದ್ಧ ಅಲ್ಪ ಯಶಸ್ಸು ಕಂಡಿದ್ದ ಎಡಗೈ ವೇಗದ ಬೌಲರ್, ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮೂರು ವಿಕೆಟ್ ಪಡೆದು ಮಿಂಚಿದರು. ಸೌತ್ ಆಫ್ರಿಕಾ ವಿರುದ್ಧ ಮೊದಲ ಓವರ್‌ನಿಂದಲೇ ಮಿಂಚಿದ ಶಾಹೀನ್ ಅಫ್ರಿದಿ, ತಮ್ಮ ಮೊದಲ ಸ್ಪೆಲ್‌ನಲ್ಲಿ 2 ಓವರ್‌ಗಳಲ್ಲಿ 2 ರನ್‌ಗೆ 2 ವಿಕೆಟ್ ಪಡೆದು ಮಿಂಚಿದ್ದರು. ತಮ್ಮ ಮೊದಲ ಓವರ್‌ನಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಪಡೆದು ಅಬ್ಬರಿಸಿದ ಶಾಹೀನ್ ಅಫ್ರಿದಿ, 2ನೇ ಓವರ್‌ನಲ್ಲಿ ರೈಲಿ ರೊಸೋ ವಿಕೆಟ್ ಉರುಳಿಸಿದರು. ಅಂತಿಮವಾಗಿ 3 ಓವರ್‌ಗಳಲ್ಲಿ 14 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.
ಇದನ್ನೂ ಓದಿ – https://sportskarnataka.com/t20-cwc-2022-pak…-runs-dls-method/