ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರೀದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜನವರಿ 27 ರಿಂದ ಪ್ರಾರಂಭವಾಗುವ ಪಾಕಿಸ್ತಾನ್ ಸೂಪರ್ ಲೀಗ್ 2022 (ಪಿಎಸ್ಎಲ್ 2022) ನ ಆರಂಭಿಕ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಅಫ್ರೀದಿ ಈ ಋತುವಿನಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡದ ಭಾಗವಾಗಿದ್ದಾರೆ.
46 ವರ್ಷದ ಸ್ಟಾರ್ ಆಲ್ ರೌಂಡರ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸೋಂಕಿಗೆ ಒಳಗಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. “ದುರದೃಷ್ಟವಶಾತ್ ನಾನಲ್ಲಿ ಕೊರೋನಾ ಸೊಂಕು ಇರುವುದು ಪತ್ತೆ ಆಗಿದೆ. ಆದರೆ ನನಗೆ ಯಾವುದೇ ರೋಗಲಕ್ಷಣಗಳಿಲ್ಲ” ಎಂದು ಬರೆದಿದ್ದಾರೆ.
“ಶೀಘ್ರವಾಗಿ ಗುಣಮುಖರಾಗಿ ಮತ್ತು ಋಣಾತ್ಮಕ ವರದಿಯೊಂದಿಗೆ ಸಾಧ್ಯವಾದಷ್ಟು ಬೇಗ ಕ್ವೆಟ್ಟಾ ಗ್ಲಾಡಿಯೇಟರ್ಸ್ ಗೆ ಹಿಂತಿರುಗಲಿದ್ದೇನೆ” ಎಂದು ತಿಳಿಸಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ನಿಗದಿಪಡಿಸಿದ ಪ್ರೋಟೋಕಾಲ್ ಅನ್ನು ಅನುಸರಿಸಿ ಶಾಹಿದ್ ಅಫ್ರೀದಿಯನ್ನು ಮನೆಯಲ್ಲಿಯೇ ಕ್ವಾರಂಟೈನ್ ಮಾಡಲಾಗುತ್ತದೆ. ಶಾಹಿದ್ ಪಿಎಸ್‌ಎಲ್‌ನ ಕೊನೆಯ ಋತುವಿನಲ್ಲಿ ಮುಲ್ತಾನ್ ಸುಲ್ತಾನ್ನ್ ತಂಡದ ಪರ ಆಡಿದ್ದರು. ಆದರೆ ಈ ಋತುವಿಗಾಗಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ಪರ ಆಡಲಿದ್ದಾರೆ.