Shikhar Dhawan – ಧನ್ಯವಾದಗಳು.. ನಿಮ್ಮ ಪ್ರೀತಿಗೆ ಅಭಾರಿ – ಶಿಖರ್ ಧವನ್
ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ಶಿಖರ್ ಧವನ್. ತನ್ನ ಸ್ಪೋಟಕ ಆಟದಿಂದಲೇ ಗಮನ ಸೆಳೆದಿರುವ ಶಿಖರ್ ಧವನ್ ಅವರಿಗೆ ಇತ್ತೀಚಿನ ದಿನಗಳಲ್ಲಿ ಅದೃಷ್ಟವೇ ಕೈಕೊಟ್ಟಿದೆ.
ಗಾಯದ ಸಮಸ್ಯೆ ಮತ್ತು ಕೆಟ್ಟ ಫಾರ್ಮ್ ನಿಂದ ಟೀಮ್ ಇಂಡಿಯಾದಿಂದ ದೂರ ಉಳಿದಿದ್ದ ಶಿಖರ್ ಧವನ್ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿದ್ದರು.
ಬಳಿಕ ವೆಸ್ಟ್ ಇಂಡೀಸ್ ಸರಣಿಗೂ ಆಯ್ಕೆಯಾಗಿದ್ದ ಶಿಖರ್ ಧವನ್ ಗೆ ಕೋವಿಡ್ ಸೋಂಕು ಆಘಾತ ನೀಡಿದೆ. ಟೀಮ್ ಇಂಡಿಯಾದ ಕ್ಯಾಂಪ್ ನಲ್ಲಿ ಏಳು ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಅರದಲ್ಲಿ ಶಿಖರ್ ಧವನ್ ಕೂಡ ಒಬ್ಬರು.
ಸದ್ಯ ಶಿಖರ್ ಧವನ್ ಅವರು ಐಸೋಲೇಷನ್ ನಲ್ಲಿದ್ದಾರೆ. ಶಿಖರ್ ಧವನ್ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರುವ ಅಭಿಮಾನಿಗಳು ಸಾಮಾಜಿಕ ಜಾಲ ತಾಣದಲ್ಲಿ ಬೇಗನೇ ಗುಣಮುಖರಾಗಿ ಎಂದು ಹಾರೈಕೆ ಮಾಡಿದ್ದರು.
ಇದೀಗ ಶಿಖರ್ ಧವನ್ ತನ್ನ ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರೀತಿಯಿಂದ ನಾನು ಚೆನ್ನಾಗಿದ್ದೇನೆ. ನಿಮ್ಮ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ ಎಂದು ಶಿಖರ್ ಧವನ್ ತನ್ನ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
Shikhar Dhawan In Positive Spirits In Isolation
ಶಿಖರ್ ಧವನ್ ಕಳೆದ ಶ್ರೀಲಂಕಾ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದರು. ಸದ್ಯ ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಶಿಖರ್ ಧವನ್ ಅವರು ವೆಸ್ಟ್ ಇಂಡೀಸ್ ವಿರುದ್ದದ ಟಿ-20 ಸರಣಿಯನ್ನು ಎದುರು ನೋಡುತ್ತಿದ್ದಾರೆ. ಹಾಗೇ ಐಪಿಎಲ್ ಬಿಡ್ಡಿಂಗ್ ಮೇಲೂ ಕಣ್ಣಿಟ್ಟಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಆಟಗಾರನಾಗಿದ್ದ ಶಿಖರ್ ಧವನ್ ಅವರನ್ನು ಡೆಲ್ಲಿ ಫ್ರಾಂಚೈಸಿ ಉಳಿಸಿಕೊಂಡಿಲ್ಲ. ಹೀಗಾಗಿ ಯಾವ ತಂಡಕ್ಕೆ ಎಷ್ಟು ಮೊತ್ತಕ್ಕೆ ಹರಾಜು ಆಗ್ತಾರೆ ಅನ್ನೋದನ್ನು ಕಾದು ನೋಡಬೇಕು.