ಪಂಜಾಬ್ ಕಿಂಗ್ಸ್ ತಂಡದ ಬ್ಯಾಟರ್ ಶಿಖರ್ ಧವನ್ ಮುಂಬರುವ IPL 2023ರ ಹಿನ್ನೆಲೆಯಲ್ಲಿ ಮೊಹಾಲಿಯಲ್ಲಿ ತರಬೇತಿ ಆರಂಭಿಸಿದ್ದಾರೆ.
ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿದ್ದ ಮಯಂಕ್ ಅಗರ್ವಾಲ್ ತಂಡದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ಟೂರ್ನಿಗೆ ಶಿಖರ್ ಧವನ್ ಅವರನ್ನ ಪಂಜಾಬ್ ಕಿಂಗ್ಸ್ ತಂಡದ ಕ್ಯಾಪ್ಟನ್ ಆಗಿ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಗಾಗಿ ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ತರಬೇತಿ ಆರಂಭಿಸಿದ್ದಾರೆ.
ತರಬೇತಿ ಶಿಬಿರದಲ್ಲಿ ಶಿಖರ್ ಧವನ್ ಅವರೊಂದಿಗೆ ಪಿಬಿಕೆಎಸ್ ತಂಡದ ಸ್ಥಳೀಯ ಆಟಗಾರರು ಸಹ ಭಾಗವಹಿಸಿದ್ದರು. ಈ ಬಾರಿಯ ಐಪಿಎಲ್ಗೆ ಪಂಜಾಬ್ ಕಿಂಗ್ಸ್ನಲ್ಲಿ ಹಲವು ಯುವ ಆಟಗಾರರು ಸ್ಥಾನ ಪಡೆದಿದ್ದು, ಕರ್ನಾಟಕದ ವಿದ್ವತ್ ಕಾವೇರಪ್ಪ ಸಹ ಪಿಬಿಕೆಎಸ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿರುವ ಶಿಖರ್ ಧವನ್, ಇದಕ್ಕಾಗಿ ಭರ್ಜರಿ ತಯಾರಿ ಆರಂಭಿಸಿದ್ದಾರೆ. ಅಲ್ಲದೇ ಈ ಬಾರಿಯ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಹೊಂದಿದ್ದಾರೆ.
Shikhar Dhawan, Panjab Kings, PBKS, Mohali, Training Session, Sports Karnataka