ಬೌಂಡರಿ ಬಾರಿಸಿ ದಾಖಲೆ ಬರೆದ Shreyas Iyer
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ವಿಶೇಷ ಸಾಧನೆ ಮಾಡಿದ್ದಾರೆ. ಅವರು ODI ವೃತ್ತಿಜೀವನದಲ್ಲಿ 100 ಬೌಂಡರಿಗಳನ್ನು ಪೂರೈಸಿದರು.

ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ 63 ರನ್‌ಗಳ ಇನ್ನಿಂಗ್ಸ್ ಕಟ್ಟಿದರು. ಈ ವೇಳೆ ಅವರು 4 ಬೌಂಡರಿ ಹಾಗೂ ಒಂದು ಸಿಕ್ಸರ್ ಬಾರಿಸಿದರು. ಈ ಪಂದ್ಯದಲ್ಲಿ ಬೌಂಡರಿ ಬಾರಿಸಿ ದಾಖಲೆ ಬರೆದಿದ್ದರು.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯಕ್ಕೂ ಮುನ್ನ ಶ್ರೇಯಸ್ 98 ಬೌಂಡರಿಗಳನ್ನು ಬಾರಿಸಿದ್ದರು. ಈ ಪಂದ್ಯದಲ್ಲಿ ಅವರು 4 ಬೌಂಡರಿಗಳನ್ನು ಬಾರಿಸಿದರು. ಈ ಮೂಲಕ ಅವರು ತಮ್ಮ ODI ವೃತ್ತಿಜೀವನದಲ್ಲಿ 100 ಬೌಂಡರಿಗಳನ್ನು ಪೂರೈಸಿದರು. ಅವರು ಇದುವರೆಗೆ ಆಡಿರುವ 29 ಪಂದ್ಯಗಳ 26 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಸಮಯದಲ್ಲಿ, ಅಯ್ಯರ್ ಒಂದು ಶತಕ ಮತ್ತು 11 ಅರ್ಧ ಶತಕಗಳ ಸಹಾಯದಿಂದ 1064 ರನ್ ಕಲೆ ಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅವರ ಅತ್ಯುತ್ತಮ ಸ್ಕೋರ್ 103 ರನ್ ಆಗಿದೆ.

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 463 ರ ಪಂದ್ಯಗಳಲ್ಲಿ 2016 ಬೌಂಡರಿಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ಸನತ್ ಜಯಸೂರ್ಯ ಎರಡನೇ ಸ್ಥಾನದಲ್ಲಿದ್ದಾರೆ. ಇವರು 445 ಪಂದ್ಯಗಳಲ್ಲಿ 1500 ಬೌಂಡರಿಗಳನ್ನು ಬಾರಿಸಿದ್ದಾರೆ. 1385 ಬೌಂಡರಿಗಳೊಂದಿಗೆ ಸಂಗಕ್ಕಾರ ಮೂರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅವರು 1159 ಬೌಂಡರಿಗಳನ್ನು ಬಾರಿಸಿದ್ದಾರೆ.